ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು: ಡಿಸೆಂಬರ್‌ನಿಂದ 120 ದಿನಗಳು ನಡ್ಡಾ ಪ್ರವಾಸ

ಬಿಜೆಪಿ
Last Updated 22 ನವೆಂಬರ್ 2020, 14:41 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಪಕ್ಷವನ್ನು ಮತ್ತಷ್ಟು ಸಂಘಟಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಡಿಸೆಂಬರ್‌ನಿಂದ 120 ದಿನಗಳ ಕಾಲ ದೇಶದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿಸೆಂಬರ್‌ 5ರಿಂದ ಉತ್ತರಾಖಂಡದಿಂದ ನಡ್ಡಾ ತಮ್ಮ ಪ್ರವಾಸ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಪ್ರತಿ ರಾಜ್ಯಕ್ಕೂ ಭೇಟಿ ನೀಡಲಿರುವ ನಡ್ಡಾ ಅವರು, ವರ್ಚುವಲ್ ಸಭೆಯ ಮೂಲಕ ಬೂತ್‌ಮಟ್ಟದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪಕ್ಷದ ಪ್ರತಿ ಶಾಸಕ, ಸಂಸದ, ಹಿರಿಯ ಮುಖಂಡರು, ಜಿಲ್ಲೆಯ ಮುಖ್ಯಸ್ಥರು ಹೀಗೆ ಎಲ್ಲರೊಂದಿಗೂ ಸಭೆ ನಡೆಸಲಿದ್ದಾರೆ. ತಳಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ನಡ್ಡಾ ಅವರು ಕೆಲವು ಬೂತ್‌ಗಳಿಗೂ ಭೇಟಿ ನೀಡಲಿದ್ದಾರೆ ಎಂದು ಸಿಂಗ್ ವಿವರಿಸಿದರು.

ನಡ್ಡಾ ತಮ್ಮ ಪ್ರಯಾಣದ ಸಂದರ್ಭದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸಂಘಟಿಸಲು ಪಕ್ಷದ ಮುಖಂಡರೊಂದಿಗೆ ಜತೆಗೂಡಿ ಕಾರ್ಯತಂತ್ರ ರೂಪಿಸಲಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮುಂದಿನ ವರ್ಷದ ಮೊದಲಾರ್ಧದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಪಕ್ಷದ ಸಿದ್ಧತೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಿಂಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT