ಭಾನುವಾರ, ಅಕ್ಟೋಬರ್ 24, 2021
24 °C

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್‌: ಎಎಪಿ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಆಮ್ ಆದ್ಮಿ ಪಕ್ಷವು(ಎಎಪಿ) ಘೋಷಿಸಿದೆ.

ಈ ಕುರಿತು ಗುರುವಾರ ಮಾಧ್ಯಮಗೋಷ್ಠಿ ನಡೆಸಿರುವ ಎಎಪಿ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, 'ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್, ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮತ್ತು 24x7 ವಿದ್ಯುತ್ ಪೂರೈಸಲಾಗುವುದು' ಎಂದು ತಿಳಿಸಿದ್ದಾರೆ.

ದೆಹಲಿಯಂತೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯಲು ಎಎಪಿಗೆ ಮತ ಚಲಾಯಿಸುವಂತೆ ಉತ್ತರ ಪ್ರದೇಶದ ಜನರಿಗೆ ಸಿಸೋಡಿಯಾ ಮನವಿ ಮಾಡಿದ್ದಾರೆ.

'ಉತ್ತರ ಪ್ರದೇಶದ ಪ್ರತಿ ಮನೆಗೂ 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ರೈತರು ಉಚಿತ ವಿದ್ಯುತ್‌ ಅನ್ನು ಪಡೆಯಬಹುದು' ಎಂದು ಸಿಸೋಡಿಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಎಎಪಿ ಸ್ಪರ್ಧಿಸುತ್ತಿದೆ. ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಎಎಪಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು