ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ ಕುರಿತ ಮಾಧ್ಯಮ ವರದಿ ನಂತರ ಬೆದರಿಕೆ: ಸಂಸ್ಥೆ ಉನ್ನತಾಧಿಕಾರಿ ದೂರು

Last Updated 17 ಆಗಸ್ಟ್ 2020, 12:42 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್‌ಬುಕ್‌ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್‌ಬುಕ್‌ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಫೇಸ್‌ಬುಕ್‌ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್‌ಲೈನ್‌ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ,’ ಎಂದು ಆರೋಪಿಸಿದ್ದಾರೆ.

‘ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್‌ಬುಕ್‌ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್‌ಬುಕ್‌ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್‌ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು,’ ಎಂದು ಅಮೆರಿಕದ ‘ವಾಲ್‌ಸ್ಟ್ರೀಟ್‌ ಜರ್ನಲ್‌’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

‘ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ’ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್‌ ದೂರಿನ ಬಗ್ಗೆ ಮಾತನಾಡಲು ಫೇಸ್‌ಬುಕ್‌ ಆಗಲಿ, ಅಂಕಿ ದಾಸ್‌ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT