ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ದೃಢಪಟ್ಟ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕ್ವಾರಂಟೈನ್: ಏಮ್ಸ್‌

ಸಂಪನ್ಮೂಲ, ಸಿಬ್ಬಂದಿ ಕೊರತೆ: ಸೋಂಕು ಸಂಪರ್ಕಿತರ ಪತ್ತೆ ಕಾರ್ಯ ಸ್ಥಗಿತ
Last Updated 23 ಏಪ್ರಿಲ್ 2021, 8:13 IST
ಅಕ್ಷರ ಗಾತ್ರ

ನವದೆಹಲಿ: ಸೋಂಕಿತರ ಸಂಪರ್ಕಕ್ಕೆ ಒಳಗಾದ ಆರೋಗ್ಯ ಕಾರ್ಯಕರ್ತರ ಪತ್ತೆ ಮತ್ತು ಲಕ್ಷಣರಹಿತ ಸೋಂಕಿತರ ಸಂಪರ್ಕಕ್ಕೆ ಒಳಗಾಗಿರುವವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಪ್ರಕ್ರಿಯೆಯನ್ನು ಕೈಬಿಡಲು ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್‌) ನಿರ್ಧರಿಸಿದೆ.

ಈಗಿನ ಕೋವಿಡ್‌–19 ಪರಿಸ್ಥಿತಿಯಿಂದಾಗಿ ಸಂಪ‍ನ್ಮೂಲ ಮತ್ತು ಸಿಬ್ಬಂದಿಯಲ್ಲಿ ಕೊರತೆ ಉಂಟಾಗಿದೆ. ಹಾಗಾಗಿ ಈ ಎರಡು ಪ್ರಕ್ರಿಯೆಗಳನ್ನು ಕೈಬಿಡುವ ನಿರ್ಧಾರವನ್ನು ಏಮ್ಸ್‌ ಕೈಗೊಂಡಿದೆ.

‘ಕೊರೊನಾ ರೋಗ ಲಕ್ಷಣಗಳನ್ನು ಹೊಂದಿರುವ ಆರೋಗ್ಯ ಕಾರ್ಯಕರ್ತರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ಕೋವಿಡ್‌ ದೃಢಪಟ್ಟ ಆರೋಗ್ಯ ಸಿಬ್ಬಂದಿಯನ್ನು ಮಾತ್ರ ಪ್ರತ್ಯೇಕ ವಾಸಕ್ಕೆ ಒಳಪಡಿಸಲಾಗವುದು’ ಎಂದು ಏಮ್ಸ್‌ ಹೇಳಿದೆ.

ಏಮ್ಸ್‌ ನಿರ್ದೇಶಕ ರಣದೀಪ್ ಗುಲೇರಿಯಾ ಅವರು ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೋವಿಡ್‌ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT