ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳ ಬಗ್ಗೆ ಗೊಂದಲ ನಿವಾರಿಸಲು ಕೇಂದ್ರದಿಂದ ಮಂತ್ರಿಗಳಿಗೆ ಜವಾಬ್ದಾರಿ

30 ದಿನ ಪೂರೈಸಿದ ರೈತರ ಪ್ರತಿಭಟನೆ
Last Updated 25 ಡಿಸೆಂಬರ್ 2020, 14:38 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ಮೂರು ನೂತನ ‘ಕೃಷಿ ಸುಧಾರಣಾ ಕಾಯ್ದೆ’ಗಳನ್ನು ರದ್ದುಮಾಡುವಂತೆ ಆಗ್ರಹಿಸಿ ದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 30 ದಿನಕ್ಕೆ ಕಾಲಿರಿಸಿದ್ದು, ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಕೃಷಿ ಕಾಯ್ದೆಗಳ ಬಗೆಗಿನ ಗೊಂದಲಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ರೈತರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್‌ ದರ್ಜೆಯ 21 ಸಚಿವರು ಸೇರಿದಂತೆ 54 ಮಂದಿ ಮಂತ್ರಿಗಳ ಭಾಗವಹಿಸಿದ್ದರು. ಇವರಿಗೆ ಹೊಸ ಕೃಷಿ ಕಾಯ್ದೆಗಳ ಬಗೆಗಿನ ಗೊಂದಲಗಳನ್ನು ನಿವಾರಿಸುವಂತೆ ಸರ್ಕಾರ ಸೂಚಿಸಿದೆ.

ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ‘ನರೇಂದ್ರ ಮೋದಿ ಅವರು ರಾಷ್ಟ್ರದ ಪ್ರಧಾನಿಯಾಗಿರುವವರೆಗೂ ರೈತರಿಂದ ಭೂಮಿಯನ್ನು ಕಸಿದುಕೊಳ್ಳಲು ಯಾರಿಂದಲ್ಲೂ ಸಾಧ್ಯವಿಲ್ಲ’ ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ‘9.4 ಕೋಟಿ ರೈತರಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ(ಪಿಎಂ–ಕಿಸಾನ್‌) ಯೋಜನೆ ಅಡಿಯಲ್ಲಿ ₹18,089 ಕೋಟಿ ಪರಿಹಾರವನ್ನು ಪ್ರಧಾನಿ ಮೋದಿಯವರು ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ರೈತ ಸಂಘಟನೆಗಳೊಂದಿಗೆ ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ರೈತರು ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಮುಂದಾಗಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT