ಬುಧವಾರ, ಆಗಸ್ಟ್ 4, 2021
27 °C

ಶರದ್ ಪವಾರ್ ಭೇಟಿಯಾದ ಫಡಣವಿಸ್: ಸೌಜನ್ಯದ ಭೇಟಿ ಎಂದ ಬಿಜೆಪಿ ಮುಖಂಡ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಪ್ರತಿಪಕ್ಷ ನಾಯಕ ದೇವೇಂದ್ರ ಫಡಣವಿಸ್ ಅವರು ಸೋಮವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಭೇಟಿ ಬಗ್ಗೆ ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ಆದರೆ, ಇದು ಕೇವಲ ಸೌಜನ್ಯದ ಭೇಟಿ ಎಂದು ಬಿಜೆಪಿ ಮುಖಂಡ ಫಡಣವಿಸ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದು, ಪವಾರ್ ಅವರು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡು ಮತ್ತೆ ತಮ್ಮ ಕೆಲಸಗಳಲ್ಲಿ ತೊಡಗಿದ್ದಾರೆ. ಹೀಗಾಗಿ, ಅವರ ಆರೋಗ್ಯ ವಿಚಾರಿಸಲೆಂದು ತೆರಳಿದ್ದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ, ಶರದ್ ಪವಾರ್ ಅವರು ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರವಿದ್ದು, ಸಹಜವಾಗಿಯೇ ಬಿಜೆಪಿ ಮುಖಂಡ ಫಡಣವಿಸ್ ಅವರು ಶರದ್ ಪವಾರ್ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು.

ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಸರ್ಕಾರದ ಕಾನೂನನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ.

ಮರಾಠಾ ಕೋಟಾ ವಿಷಯವನ್ನು ರಾಜ್ಯ ಸರ್ಕಾರ ನಿಭಾಯಿಸಿದ ರೀತಿಯನ್ನು ಖಂಡಿಸಿ ಜೂನ್ 5 ರಂದು ಪ್ರತಿಭಟನೆ ನಡೆಸಲು ಬಿಜೆಪಿ ಯೋಜಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ಬಗ್ಗೆಯೂ ಉದ್ಧವ್ ಠಾಕ್ರೆ ನೇತೃತ್ವದ ರಾಜ್ಯ ಸರ್ಕಾರವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಫಢಣವಿಸ್ ತೀವ್ರ ಟೀಕೆಗೈದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು