ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಮಸೂದೆಗಳು ಕೃಷಿ ಮಾರುಕಟ್ಟೆಗಳಿಗೆ ವಿರುದ್ಧವಲ್ಲ: ಪ್ರಧಾನಿ ಮೋದಿ

Last Updated 21 ಸೆಪ್ಟೆಂಬರ್ 2020, 9:01 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿರುವ ಕೃಷಿ ಮಸೂದೆಗಳು ಕೃಷಿ ಮಾರುಕಟ್ಟೆಗಳಿಗೆ ವಿರುದ್ಧವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಹಾರದಲ್ಲಿ ₹ 14,258 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 9 ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಮಸೂದೆಗಳು 21ನೇ ಶತಮಾನದ ಭಾರತದ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಕೃಷಿ ಸಂಬಂಧಿತ ಸುಗ್ರೀವಾಜ್ಞೆ ಹೊರಡಿಸಿದ ನಂತರ ಹಲವು ರಾಜ್ಯಗಳಲ್ಲಿ ರೈತರು ಬೆಳೆಗಳಿಗೆ ಉತ್ತಮ ದರ ಪಡೆಯುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

‘ಕನಿಷ್ಠ ಬೆಂಬಲ ಬೆಲೆ, ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ ಮುಂದುವರಿಯುತ್ತದೆ ಎಂಬುದಾಗಿ ರೈತರಿಗೆ ಭರವಸೆ ನೀಡಲು ಬಯಸುತ್ತೇನೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT