ಭಾನುವಾರ, ನವೆಂಬರ್ 29, 2020
21 °C

ಕೃಷಿ ಮಸೂದೆ ರೈತರಿಗೆ ಮರಣ ಶಾಸನ: ರಾಹುಲ್ ಗಾಂಧಿ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೃಷಿ ಸಂಬಂಧಿ ಮಸೂದೆಗಳು ರೈತರಿಗೆ ಮರಣ ಶಾಸನವಾಗಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಟ್ವೀಟ್ ಮಾಡಿದ್ದಾರೆ.

‘ಸದನದ ಒಳಗೆ ಮತ್ತು ಹೊರಗೆ ಕೃಷಿ ಮಸೂದೆಗಳನ್ನು ವಿರೋಧಿಸುವವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದ್ದು, ಇದು ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂಬುದಕ್ಕೆ ಸಾಕ್ಷಿ’ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 

‘ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ನೀಡುವಾಗ ವಿರೋಧ ಪಕ್ಷಗಳು ಮಸೂದೆಗಳನ್ನು ಮತಕ್ಕೆ ಹಾಕಿ ಎಂದು ಒತ್ತಾಯಿಸಿದವು. ಆ ವೇಳೆ ಅವರೆಲ್ಲ ತಮ್ಮ ಸ್ಥಾನಗಳಲ್ಲೇ ಕುಳಿತಿದ್ದರು. ಆದರೆ, ಸರ್ಕಾರ ವಿರೋಧ ಪಕ್ಷದವರು ತಮ್ಮ ಸ್ಥಾನಗಳಲ್ಲಿರಲಿಲ್ಲ ಎಂದು ಹೇಳಿದೆ‘ ಎಂದು ದೂರಿರುವ ರಾಹುಲ್‌ ಗಾಂಧಿ, ಸರ್ಕಾರದ ಹೇಳಿಕೆಯಿರುವ ಸುದ್ದಿಯ ತುಣಕನ್ನು ಟ್ವೀಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು