ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾನೂನುಗಳಲ್ಲಿ 'ರೈತರ ಹಿತ': ಮೋದಿ ಜೊತೆಗಿನ ಸಭೆ ಬಳಿಕ ನಿತೀಶ್‌ ಹೇಳಿಕೆ

Last Updated 11 ಫೆಬ್ರುವರಿ 2021, 16:50 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್, ರೈತರ ಹಿತದೃಷ್ಟಿಯಿಂದಲೇ ಹೊಸ ಕೃಷಿ ಕಾನೂನುಗಳನ್ನುರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿತೀಶ್‌, 'ಕಾನೂನುಗಳು ರೈತರ ಹಿತದೃಷ್ಟಿಯಿಂದ ಇವೆಯೇ ಹೊರತು ಅವರ ವಿರುದ್ಧವಲ್ಲ. ಮೂರುಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಒಕ್ಕೂಟಗಳೊಂದಿಗೆ ಸಭೆ ನಡೆಸಲು ಮುಂದಾಗುವ ಮೂಲಕ ಕೇಂದ್ರವು ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ' ಎಂದಿದ್ದಾರೆ.

ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಎರಡು ತಿಂಗಳಿಗೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಸಮಸ್ಯೆಯು ಶೀಘ್ರದಲ್ಲೇ ಬಗೆಹರಿಯಲಿದೆಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ 16 ರಂದು ಜನತಾದಳ (ಒಕ್ಕೂಟ) ಅಧ್ಯಕ್ಷ ನಿತೀಶ್‌ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿಯಾಗಿ ಸತತ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ನಿತೀಶ್‌, ಪ್ರಧಾನಿ ಮೋದಿ ಜೊತೆ ನಡೆಸಿದ ಮೊದಲ ಸಭೆ ಇದಾಗಿದೆ. ಇದು ಕೇವಲ 'ಸೌಜನ್ಯ ಸಭೆ'ಯಾಗಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಯಾವುದೇ ಮಾತುಕತೆ ನಡೆಸಿಲ್ಲ ಎಂದು ನಿತೀಶ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT