ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಲು ಈಗಲೂ ಸಿದ್ಧ: ತೋಮರ್

ಗುರುಗ್ರಾಮ: ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಐತಿಹಾಸಿಕ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಣ್ಣಿಸಿದ್ದಾರೆ. ಆದರೆ, ಆ ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ ಕಾರ್ಯಕರ್ತರು ಈಗಲೂ ಸಿದ್ಧರಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಬಿಜೆಪಿಯ ಕಿಸಾನ್ ಮೋರ್ಚಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು ಯಾವಾಗಲೂ ರೈತರ ಒಳಿತಿಗಾಗಿಯೇ ಕೆಲಸ ಮಾಡಿದ್ದೇವೆ. ರೈತರ ಹಿತಾಸಕ್ತಿಯ ಪರವಾಗಿಯೇ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.
ಓದಿ: ನಿಮಗೆ ರೈತರ ಬಗ್ಗೆ ಕಾಳಜಿ ಇದ್ದರೆ ಲೋಕಸಭೆ ಕಲಾಪ ನಡೆಯಲು ಬಿಡಿ: ತೋಮರ್
ರೈತರ ಪ್ರತಿಭಟನೆಗಳು ಮುಂಬರುವ ವಿಧಾನಸಭೆ ಚುನಾವಣೆಗಳ ಮೇಲೆ ಪರಿಣಾಮ ಬೀರಲಾರವು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ. ರೈತರ ಪ್ರತಿಭಟನೆಯು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನಸಭೆ ಚುನಾವಣೆಗಳೂ ಸೇರಿದಂತೆ ದೇಶದಾದ್ಯಂತ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು. ಪಕ್ಷವು ಚುನಾವಣೆಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.
ರೈತರ ಆದಾಯವನ್ನು ದ್ವಿಗುಣಗೊಳಿಸಲು ಮೋದಿ ಸರ್ಕಾರ ನಿರಂತರವಾಗಿ ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.