ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಯಿಂದ ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲ: ಪ್ರಿಯಾಂಕಾ

Last Updated 28 ಆಗಸ್ಟ್ 2021, 10:31 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ.

'ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು ₹16 ಕಡಿಮೆ ಮಾಡಿರುವ ವರದಿಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ರೈತರ ಉತ್ಪನ್ನಗಳನ್ನು ನಿರ್ಧರಿಸುವ ಹಕ್ಕನ್ನು ಆಡಳಿತ ಪಕ್ಷದ ಕೋಟ್ಯಧಿಪತಿ ಸ್ನೇಹಿತರಿಗೆ ನೀಡಿದರೆ ಹೀಗೆ ಸಂಭವಿಸುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ರೈತರ ಸಂಕಷ್ಟಕ್ಕೆ ಕಾರಣವಾಗಿದೆ' ಎಂದು ಹೇಳಿದ್ದಾರೆ.

ಮೂರು 'ಕಪ್ಪು' ಕೃಷಿ ಕಾನೂನುಗಳನ್ನು ರೈತರು ಏಕೆ ವಿರೋಧಿಸುತ್ತಿದ್ದಾರೆ? ಯಾಕೆಂದರೆ ರೈತರ ಶ್ರಮದಿಂದ ಬೆಳೆದ ಬೆಳೆಗಳಿಗೆ ಬೆಲೆ ಮತ್ತು ಇತರ ವಸ್ತುಗಳನ್ನು ನಿರ್ಧರಿಸುವ ಹಕ್ಕನ್ನು ಬಿಜೆಪಿಯ ಕೋಟ್ಯಧಿಪತಿ ಗೆಳೆಯರಿಗೆ ನೀಡಿದರೆ ಇದು ಸಂಭವಿಸುತ್ತದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೃಷಿ ಕಾಯ್ದೆ ರೂಪಿಸಿರುವುದು ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರ ಲಾಭಕ್ಕಾಗಿ ಎಂದವರು ಆರೋಪಿಸಿದರು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆ ನಡೆಸಿದ ಹಲವು ಸುತ್ತಿನ ಮಾತುಕತೆಗಳು ವಿಫಲಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT