ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನದ ಮೊದಲ ದಿನವೇ ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು: ರಾಜನಾಥ್‌ ಸಿಂಗ್‌

Last Updated 28 ನವೆಂಬರ್ 2021, 1:58 IST
ಅಕ್ಷರ ಗಾತ್ರ

ನವದೆಹಲಿ:ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ತಿಳಿಸಿದರು.

ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನಾವು ರೈತರನ್ನು ದೇವರೆಂದು ಪರಿಗಣಿಸುತ್ತೇವೆ. ಬಿಜೆಪಿ ಸರ್ಕಾರ ರೈತರ ಬಗ್ಗೆ ಸದಾ ಸಹಾನುಭೂತಿ ಹೊಂದಿದೆ. ಮೂರು ಕಾನೂನುಗಳ ವಿರುದ್ಧ ಹೋರಾಟ ನಡೆಯಿತು. ಆ ಹಿನ್ನೆಲೆಯಲ್ಲಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ಮಾಡಿದ್ದಾರೆ‘ ಎಂದು ಹೇಳಿದರು.

‘ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು‘ ಎಂದು ರಾಜನಾಥ್‌ ಸಿಂಗ್‌ ಭರವಸೆ ನೀಡಿದರು.

ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದು, ಕಾಯ್ದೆಗಳ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಸದ್ಯದಲ್ಲೇ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಮೂರು ಕೃಷಿ ಕಾಯ್ದೆಗಳ ರದ್ದತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದೂ ಪ್ರಧಾನಿ ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಿರಲಿಲ್ಲ. ಅಲ್ಲದೆ ಬಜೆಟ್ ಮತ್ತು ಮುಂಗಾರು ಅಧಿವೇಶನದಅವಧಿಯನ್ನು ಕೂಡ ಕಡಿಮೆ ಮಾಡಲಾಗಿತ್ತು.

ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನವೆಂಬರ್ 29 ರಿಂದ ಡಿಸೆಂಬರ್ 23ರ ವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT