ಗುರುವಾರ , ಫೆಬ್ರವರಿ 25, 2021
28 °C
ಸಿಂಘು ಗಡಿಯಲ್ಲೂ ಪಂಜಾಬ್‌ ರೈತ ಸಂಘಟನೆಗಳ ಸಭೆ

ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಹಿಂಸಾಚಾರ: ಇಂದು ಸಂಯುಕ್ತ ಕಿಸಾನ್‌ ಮೋರ್ಚಾ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನೆಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಇಂದು (ಬುಧವಾರ) ವಿವಿಧ ರೈತ ಸಂಘಗಳ ಮುಖಂಡರೊಂದಿಗೆ ಸಭೆ ನಡೆಸಲಿದೆ.

‘ಇಂದು ಮಧ್ಯಾಹ್ನ 3 ಗಂಟೆಗೆ ಎಸ್‌ಕೆಎಂ ಒಕ್ಕೂಟ ರೈತ ಸಂಘಟನೆಗಳ ಸಭೆ ಕರೆದಿದೆ. ಈ ಸಭೆಯಲ್ಲಿ ಮಂಗಳವಾರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಕುರಿತು ಚರ್ಚಿಸಲಾಗುತ್ತದೆ‘ ಎಂದು ಹಿರಿಯ ರೈತ ನಾಯಕರೊಬ್ಬರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ, 41 ವಿವಿಧ ರೈತ ಸಂಘಗಳ ಮಹಾ ಒಕ್ಕೂಟವಾಗಿದ್ದು, ಈ ಒಕ್ಕೂಟದ ಅಡಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ವಿವಿಧ ಗಡಿಭಾಗಗಳಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಸಂಯುಕ್ತ ಕಿಸಾನ್ ಮೋರ್ಚ್ ಸಭೆಯಲ್ಲಿ ಭಾಗವಹಿಸುವ ಮುನ್ನ ಪಂಜಾಬ್‌ನ 32 ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಸಿಂಘು ಗಡಿ ಭಾಗದಲ್ಲಿ ಸಭೆ ನಡೆಸಿ ಇದೇ ವಿಚಾರದ ಕುರಿತು ಚರ್ಚೆ ನಡೆಸಲಿದ್ದಾರೆ. 

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದ ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. 22 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು