ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆಗೆ ಕೀಟನಾಶಕ ಸಿಂಪಡಿಸಿ ಕುಸಿದು ಬಿದ್ದು ಮೃತಪಟ್ಟ ರೈತ

ಮಹಾರಾಷ್ಟ್ರದ ನಾಗ್ಪುರದಲ್ಲಿ ಘಟನೆ
Last Updated 19 ಸೆಪ್ಟೆಂಬರ್ 2022, 2:16 IST
ಅಕ್ಷರ ಗಾತ್ರ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಗದ್ದೆಯಲ್ಲಿ ಬೆಳೆಗೆ ಕೀಟನಾಶಕ ಸಿಂಪಡಿಸಿದ ರೈತರೊಬ್ಬರು, ಬಳಿಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕಚೂರ್‌ವಾಲಿ ಗ್ರಾಮದ ರಾಮ್‌ತೇಕ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ರೈತರನ್ನು ರಮೇಶ್ ಗುಲಾಬ್ ಚಾರ್ದೆ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗಿನ ಜಾವ ಅವರು ಗದ್ದೆಗೆ ತೆರಳಿ ಕೀಟನಾಶಕ ಸಿಂಪಡಣೆಯಲ್ಲಿ ತೊಡಗಿದ್ದರು. ಮಧ್ಯಾಹ್ನದ ವೇಳೆಗೆ ಅವರು ಕುಸಿದುಬಿದ್ದಿದ್ದರು.

ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ರೈತರಿಗೆ ನಾಲ್ಕು ಎಕರೆ ಕೃಷಿ ಭೂಮಿಯಿದ್ದು, ತಾಯಿ, ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ.

ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಯ್ಯಲಾಗಿದ್ದು, ಕೀಟನಾಶಕದ ಮಾದರಿಯನ್ನು ಕೂಡ ಸಂಗ್ರಹಿಸಲಾಗಿದೆ, ರೈತನ ಸಾವಿನ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT