ರೈತರ ಪ್ರತಿಭಟನೆ: ಟಿಕ್ರಿ ಗಡಿ ಸಮೀಪದ ಹಳ್ಳಿಯಲ್ಲಿ ರೈತ ಸಾವು

ಚಂಡಿಗಡ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಟಿಕ್ರಿ ಗಡಿ ಭಾಗದ ಸಮೀಪದ ಹಳ್ಳಿಯೊಂದರಲ್ಲಿ 38ರ ವರ್ಷದ ರೈತರೊಬ್ಬರು ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಮೃತ ರೈತರನ್ನು ಬತ್ತಿಂಡ ಜಿಲ್ಲೆಯ ತುಂಗ್ವಾಲಿ ಹಳ್ಳಿಯ ನಿವಾಸಿ ಜೈಸಿಂಗ್ ಎಂದು ಗುರುತಿಸಲಾಗಿದೆ. ಇವರ ಸಹೋದರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ–ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘ(ಬಿಕೆಯು–ಏಕ್ತಾ ಉಗ್ರಹಾನ್) ಮುಖಂಡ ಶಿಂಗಾರ್ ಸಿಂಗ್ ತಿಳಿಸಿದ್ದಾರೆ.
ರೈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ಕಾರಣ ತಿಳಿಯಬಹುದು ಎಂದು ಬಹದ್ದೂರ್‌ಗಡ ಠಾಣೆಯ ಪೊಲಿಸ್ ಅಧಿಕಾರಿ ತಿಳಿಸಿದ್ದಾರೆ.
ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ಆರಂಭವಾದಾಗಿನಿಂದ ಪಂಜಾಬ್‌ನಲ್ಲಿ ವಿವಿಧ ಕಾರಣಗಳಿಂದಾಗಿ 20 ಮಂದಿ ರೈತರು ಸಾವನ್ನಪ್ಪಿದ್ದಾರೆ ಎಂದು ಬಿಕೆಯು ಸಂಘಟನೆಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.