ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೇಡ್‌ನಲ್ಲಿ 2 ಲಕ್ಷ ಟ್ರ್ಯಾಕ್ಟರ್‌ಗಳು ಭಾಗಿ: ರೈತ ಮುಖಂಡರ ಹೇಳಿಕೆ

Last Updated 24 ಜನವರಿ 2021, 7:59 IST
ಅಕ್ಷರ ಗಾತ್ರ

ನವದೆಹಲಿ: ಗಣರಾಜ್ಯೋತ್ಸವದ ದಿನ ರೈತರು ನಡೆಸಲು ಉದ್ದೇಶಿಸಿರುವ ‘ಕಿಸಾನ್ ಗಣತಂತ್ರ ಪರೇಡ್’ನಲ್ಲಿ 2 ಲಕ್ಷ ಟ್ರ್ಯಾಕ್ಟರ್‌ಗಳು ಭಾಗವಹಿಸಲಿವೆ. ವ್ಯವಸ್ಥೆ ನೋಡಿಕೊಳ್ಳಲು 2,500 ಸ್ವಯಂ ಸೇವಕರನ್ನು ನಿಯೋಜಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಪರೇಡ್‌ನಲ್ಲಿ ಭಾಗವಹಿಸುವ ಜನಸಂಖ್ಯೆಯನ್ನು ಆಧರಿಸಿ ಸ್ವಯಂ ಸೇವಕರನ್ನು ಹೆಚ್ಚಿಸಲಾಗುತ್ತದೆ ಎಂದು ಮುಖಂಡರು ತಿಳಿಸಿದ್ದಾರೆ.

ಕೀರ್ತಿ ಕಿಸಾನ್‌ ಯೂನಿಯನ್‌ ಅಧ್ಯಕ್ಷ ನಿರ್ಭಯ್‌ ಸಿಂಗ್‌ ದುಡಿಕೆ ಮಾತನಾಡಿ, ‘ಪಂಜಾಜ್‌ ರೈತ ಮುಖಂಡರೊಂದಿಗೆ ಸತತ 3 ಗಂಟೆಗಳ ಕಾಲ ಸಭೆ ನಡೆಸಲಾಗಿದೆ. ಪರೇಡ್‌ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳ ಪಾಲ್ಗೊಳ್ಳಲಿವೆ’ ಎಂದು ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಪರೇಡ್‌ಗೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರ ಸಂಘಟನೆಗಳು ಪೊಲೀಸರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಪರೇಡ್‌ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಆಗ್ರಹಿತಿ ಕಳೆದ ನವೆಂಬರ್‌ 28ರಿಂದ ಪಂಜಾಬ್‌, ಹರಿಯಾಣ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT