ಶುಕ್ರವಾರ, ಫೆಬ್ರವರಿ 26, 2021
32 °C

ರೈತರ ಪ್ರತಿಭಟನೆ ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತ: ಅಖಿಲೇಶ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯು ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ ಒಂದು ತಿಂಗಳು ಪೂರೈಸಿದೆ. ತಮ್ಮ ಆತ್ಮೀಯ ಶ್ರೀಮಂತ ಸ್ನೇಹಿತರಿಗಾಗಿ ಬಿಜೆಪಿಯು ರೈತರು, ಕಾರ್ಮಿಕರು, ಮಧ್ಯಮ ಮತ್ತು ಕೆಳವರ್ಗದರ ಇಚ್ಛೆಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ರೈತರ ಈ ಪ್ರತಿಭಟನೆಯು ಬಿಜೆಪಿ ಸರ್ಕಾರದ ವೈಫಲ್ಯದ ಜೀವಂತ ಸ್ಮಾರಕವಾಗಿದೆ’ ಎಂದಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ಇತರ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನೆಯು ಶುಕ್ರವಾರ 30 ನೇ ದಿನಕ್ಕೆ ಕಾಲಿಟ್ಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು