ಗುರುವಾರ , ಜೂನ್ 30, 2022
21 °C

ದೇಶದಲ್ಲಿ ವಿರೋಧ ಪಕ್ಷ ದುರ್ಬಲವಾಗಿದೆ: ಟಿಕಾಯತ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಗಾಜಿಯಾಬಾದ್ (ಉ.ಪ್ರದೇಶ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದ ಒಂದು ದಿನದ ಬಳಿಕ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ದೇಶದ ಪ್ರತಿಪಕ್ಷಗಳು ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ.

'ನಾವು ರೈತರು ಬೀದಿಗಳಲ್ಲಿ ಕುಳಿತಿದ್ದೇವೆ, ಪ್ರತಿಪಕ್ಷಗಳು ಪ್ರಬಲವಾಗಿದ್ದರೆ ನಾವದನ್ನು ಮಾಡಬೇಕಾಗಿರಲಿಲ್ಲ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು. ಇದನ್ನೇ ದೀದಿ ಅವರಿಗೂ ತಿಳಿಸಿರುವುದಾಗಿ' ಹೇಳಿದ್ದಾರೆ.

ಮಮತಾ ಅವರನ್ನು ಭೇಟಿಯಾಗಲು ಕೇಂದ್ರದಿಂದ ಅನುಮತಿ ಪಡೆಯಲಾಗಿತ್ತೇ ಎಂಬುದನ್ನು ಕೇಳಿದಾಗ, 'ನಾನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೇನೆ. ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆಯನ್ನಲ್ಲ. ನಾನು ಅಫ್ಗಾನಿಸ್ತಾನದ ಅಧ್ಯಕ್ಷರನ್ನು ಭೇಟಿ ಮಾಡಿ ಬಂದಿದ್ದೇನೆ. ಇದಕ್ಕಾಗಿ ಕೇಂದ್ರದ ಅನುಮತಿ ಬೇಕೇ? ಸಿಎಂ ಭೇಟಿಯಾಗಲು ವೀಸಾ ಅಗತ್ಯವಿದೆಯೇ?' ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 

'ರಾಜ್ಯ ನೀತಿಗಳ ಬಗ್ಗೆ ನಾವು ಎಲ್ಲ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇವೆ. ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರವಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನಾವು ಅವರನ್ನು ಭೇಟಿಯಾಗುತ್ತೇವೆ. ಈ ವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ' ಎಂದು ತಿಳಿಸಿದ್ದಾರೆ.

ರಾಕೇಶ್ ಟಿಕಾಯತ್‌ ಮತ್ತು ಯುಧ್‌ವೀರ್ ಸಿಂಗ್ ನೇತೃತ್ವದ ರೈತ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿದ್ದ ಮಮತಾ ಬ್ಯಾನರ್ಜಿ, ‘ರೈತರ ಆಂದೋಲನಕ್ಕೆ ನಮ್ಮ ಬೆಂಬಲ ಇರುತ್ತದೆ’ ಎಂದು ಘೋಷಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು