ರೈತರಿಗೆ ತಮಗೇನು ಬೇಕೆಂಬುದು ತಿಳಿದಿಲ್ಲ: ಹೇಮಾ ಮಾಲಿನಿ

ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮಗೆ ಏನು ಬೆೇಕೆಂಬುದು ತಿಳಿದಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದೆ ಹಾಗೂ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಆರೋಪಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿರುವುದು ಒಳ್ಳೆಯದು. ಇದು ಪರಿಸ್ಥಿತಿಯನ್ನು ಶಾಂತಗೊಳಿಸಲಿದೆ. ಹಲವು ಸುತ್ತಿನ ಮಾತುಕತೆಯ ಬಳಿಕವೂ ರೈತರು ಒಮ್ಮತಕ್ಕೆ ಬರಲು ಸಿದ್ಧರಿಲ್ಲ. ಅವರಿಗೆ ಏನು ಬೇಕು ಮತ್ತು ಕೃಷಿ ಕಾನೂನುಗಳಲ್ಲಿ ಸಮಸ್ಯೆ ಏನಿದೆ ಎಂಬುದು ಸಹ ತಿಳಿದಿಲ್ಲ. ಇದರರ್ಥ ಯಾರೋ ಹೇಳಿದ್ದರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಮಾ ಮಾಲಿನಿ ಆರೋಪಿಸಿದರು.
ಇದೇ ವೇಳೆ ಪಂಜಾಬ್‌ನಲ್ಲಿ ಮೊಬೈಲ್ ಟವರ್‌ಗಳನ್ನು ಧ್ವಂಸಗೊಳಿಸಿರುವ ರೈತರ ವಿರುದ್ಧ ಹೇಮಾ ಮಾಲಿನಿ ಆಕ್ರೋಶ ತೋಡಿಕೊಂಡರು.
ಪಂಜಾಬ್ ಸಾಕಷ್ಟು ನಷ್ಟ ಅನುಭವಿಸಿದೆ. ರೈತರು ಮೊಬೈಲ್ ಟವರ್‌ಗಳನ್ನು ಧ್ವಂಸಗೊಳಿಸಿರುವುದು ಉತ್ತಮ ಅಂಶವಲ್ಲ. ಸರ್ಕಾರವು ಪದೇ ಪದೇ ಮಾತುಕತೆಗೆ ಆಹ್ವಾನಿಸಿದೆ. ಆದರೆ ಅವರಿಗೆ ಯಾವುದೇ ಅಜೆಂಡಾ ಕೂಡಾ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: 60ಕ್ಕೂ ಹೆಚ್ಚು ರೈತರು ಬಲಿಯಾದಾಗ ಮುಜುಗರ ಆಗಲಿಲ್ಲವೇ? ರಾಹುಲ್ ಗಾಂಧಿ ಪ್ರಶ್ನೆ
ಸರದಿ ಬಂದಾಗ ಕೋವಿಡ್-19 ಲಸಿಕೆ ಪಡೆಯಲಿದ್ದೇನೆ...
ಏತನ್ಮಧ್ಯೆ ಪ್ರತಿಕ್ರಿಯಿಸಿರುವ ಹೇಮಾ ಮಾಲಿನಿ, ತನ್ನ ಸರದಿ ಬಂದಾಗ ಖಂಡಿತವಾಗಿಯೂ ಕೋವಿಡ್-19 ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.
ವಿರೋಧ ಪಕ್ಷಗಳು ಆರೋಪಗಳನ್ನು ಮಾಡುತ್ತಿವೆ. ಸರ್ಕಾರಗಳು ಏನೇ ಹೇಳಿದರೂ ಅದಕ್ಕೆ ವಿರುದ್ಧವಾಗಿ ಹೇಳುವುದು ಅವರ ಕೆಲಸ ಎಂದು ಟೀಕಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.