ಮಂಗಳವಾರ, ಆಗಸ್ಟ್ 16, 2022
22 °C

ರೈತರು ಇನ್ನೆಷ್ಟು ಬಲಿದಾನ ಮಾಡಬೇಕು? ರಾಹುಲ್ ಗಾಂಧಿ ಪ್ರಶ್ನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಕಳೆದ 17 ದಿನಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಧ್ಯಮ ವರದಿಯೊಂದನ್ನು ಉಲ್ಲೇಖ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರು ಇನ್ನೆಷ್ಟು ಬಲಿದಾನ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರಕಾರ ಹಾಗೂ ರೈತರ ಪ್ರತಿನಿಧಿಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಬಿಕ್ಕಟ್ಟು ಬಗೆ ಹರಿದಿಲ್ಲ. ಇನ್ನೊಂದೆಡೆ ರೈತರು, ರಾಷ್ಟ್ರ ರಾಜಧಾನಿ ನವದೆಹಲಿ, ಹರಿಯಾಣ ಗಡಿ ಭಾಗಗಳಲ್ಲಿ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 

'ಕೇಂದ್ರ ಸರಕಾರವು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ರೈತರು ಇನ್ನು ಎಷ್ಟು ಬಲಿದಾನ ಮಾಡಬೇಕಾಗುತ್ತದೆ?' ಎಂದು ರಾಹುಲ್ ಗಾಂಧಿ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡರು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ನಿರತ 11 ರೈತರು ವಿವಿಧ ಕಾರಣಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ರಾಹುಲ್ ಗಾಂಧಿ ಹಂಚಿದ್ದಾರೆ.

 

 

 

ಏತನ್ಮಧ್ಯೆ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: 

 

ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿರುವ ರಾಹುಲ್ ಗಾಂಧಿ, ಕೇಂದ್ರ ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಲೇ ಇದ್ದಾರೆ. ಡಿಸೆಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಚಾರಣೆಯಂದು, ಕೇಂದ್ರ ಸರಕಾರವು ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು