ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ನಿರ್ಲಕ್ಷ್ಯದಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ: ಮಮತಾ ಬ್ಯಾನರ್ಜಿ

Last Updated 14 ಜೂನ್ 2021, 15:29 IST
ಅಕ್ಷರ ಗಾತ್ರ

ಕೋಲ್ಕತ್ತ: ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಾದ್ಯಂತ ರೈತರು ತೊಂದರೆಗೆ ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ದೇಶದ ಬೆನ್ನಲುಬು ಆಗಿರುವ ರೈತರ ಕಲ್ಯಾಣಕ್ಕಾಗಿ ಹೋರಾಡುವುದಾಗಿ ದೀದಿ ಘೋಷಣೆ ಮಾಡಿದ್ದಾರೆ.

ಸಿಂಗೂರು ಭೂ ಪುನರ್ವಸತಿ ಮತ್ತು ಅಭಿವೃದ್ಧಿ ಕಾಯ್ದೆ ಜಾರಿಯ 10ನೇ ವರ್ಷಾಚರಣೆಯಂದು ಪ್ರತಿಕ್ರಿಯೆ ನೀಡಿರುವ ಮಮತಾ, ಸುದೀರ್ಘ ಹೋರಾಟದ ಬಳಿಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು ಎಂದಿದ್ದಾರೆ.

'ಇಂದು ದೇಶದಾದ್ಯಂತ ರೈತ ಸಹೋದರರು ಕೇಂದ್ರದ ನಿರ್ಲಕ್ಷ್ಯದಿಂದ ಬಳಲುತ್ತಿದ್ದಾರೆ ಎಂಬುದು ಅತೀವ ನೋವುಂಟು ಮಾಡಿದೆ. ನಮ್ಮ ಸಮಾಜದ ಬೆನ್ನಲುಬು ಆಗಿರುವ ರೈತರ ಯೋಗಕ್ಷೇಮಕ್ಕಾಗಿ ನಮ್ಮ ಹೋರಾಟವನ್ನು ಮುಂದುವರಿಸಲಿದ್ದೇವೆ. ಅವರ ಹಕ್ಕುಗಳನ್ನು ಎತ್ತಿಹಿಡಿಯುವುದಕ್ಕೆ ಮೊದಲ ಆದತ್ಯೆ' ಎಂದಿದ್ದಾರೆ.

10 ವರ್ಷಗಳ ಹಿಂದೆ ಇದೇ ದಿನದಂದೂ ಸಿಂಗೂರು ಭೂ ಪುನರ್ವಸತಿ ಮತ್ತು ಅಭಿವೃದ್ಧಿ ಮಸೂದೆಯನ್ನು ದೀರ್ಘ ಹೋರಾಟದ ಬಳಿಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ನಾವು ನಮ್ಮ ರೈತರ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಡಿದ್ದೇವೆ. ಅಲ್ಲದೆ ರೈತರ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಅವರ ಕುಂದು ಕೊರತೆಗಳನ್ನು ಪರಿಹರಿಸಿದ್ದೇವೆ ಎಂದಿದ್ದಾರೆ.

ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕರಿಸಿದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ಪರ ಮಮತಾ ಬ್ಯಾನರ್ಜಿ ಧ್ವನಿ ಎತ್ತಿದ್ದಾರೆ. ಅಲ್ಲದೆ ರೈತರಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

ಇತ್ತೀಚೆಗಷ್ಟೇ ರೈತ ಮುಖಂಡ ರಾಕೇಶ್ ಟಿಕಾಯತ್ ಹಾಗೂ ಯಧುವೀರ್ ಸಿಂಗ್ ಅವರನ್ನು ಭೇಟಿಯಾಗಿದ್ದ ಮಮತಾ ಈ ಕುರಿತು ಸುದೀರ್ಘವಾಗಿ ಚರ್ಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT