ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವದ ದಿನ ನಡೆದ ಗಲಭೆಗೆ ರೈತರು ಜವಾಬ್ದಾರರಲ್ಲ: ಎಚ್.ಡಿ. ದೇವೇಗೌಡ

Last Updated 4 ಫೆಬ್ರುವರಿ 2021, 10:44 IST
ಅಕ್ಷರ ಗಾತ್ರ

ನವದೆಹಲಿ: ಗಣರಾಜ್ಯೋತ್ಸವದ ದಿನ ಕೆಲವು ದುಷ್ಕರ್ಮಿಗಳು ನಡೆಸಿದ ಹಿಂಸಾಚಾರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಖಂಡಿಸಿದ್ದಾರೆ. ಆದರೆ, ರೈತರು ಈ ಗಲಭೆಗೆ ಜವಾಬ್ದಾರರಲ್ಲ. ಅವರನ್ನು ಶಿಕ್ಷೆಗೆ ಒಳಪಡಿಸಬಾರದು ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆ ವಿಷಯದ ಕುರಿತಾಗಿ ರಾಜ್ಯಸಭೆಯಲ್ಲಿ 15 ಗಂಟೆಗಳ ಸತತ ಚರ್ಚೆ ನಡೆಸಲಾಗುತ್ತಿದ್ದು, ಈ ಸಂದರ್ಭ ಮಾತನಾಡಿದ ಅವರು, ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿಗಳಲ್ಲಿ ಕಾಂಕ್ರಿಟ್ ಗೋಡೆ ನಿರ್ಮಿಸುತ್ತಿರುವ ಸರ್ಕಾರದ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಗೋಡೆ ನಿರ್ಮಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದರ ಬದಲು, ಸರ್ಕಾರ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

ಕೃಷಿ ಕಾಯ್ದೆಗಳ ವಿಷಯ ರಾಜ್ಯಗಳಿಗೆ ಸಂಬಂಧಪಟ್ಟಿರುವುದರಿಂದ ರಾಜ್ಯಸರ್ಕಾರಗಳ ಅಭಿಪ್ರಾಯಗಳನ್ನೂ ಪಡೆದುಕೊಳ್ಳಬೇಕು ಎಂದು ಸರ್ಕಾರವನ್ನುಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ದೆಹಲಿ ಗಡಿಗಳಲ್ಲಿ ತಡೆಗೋಡೆ ನಿರ್ಮಿಸುತ್ತಿರುವ ಬಗ್ಗೆ ಆಕ್ಷೇಪ ಎತ್ತಿದ್ದ ರೈತರು ರಾಷ್ಟ್ರ ರಾಜಧಾನಿಯ ಗಡಿಗಳು ಈಗ ಅಂತರರಾಷ್ಟ್ರೀಯ ಗಡಿಗಳಂತೆ ಭಾಸವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳು, ಲೋಹದ ತಡೆಗೋಡೆಗಳು, ತಂತಿ ಬೇಲಿಗಳೂ ಸೇರಿದಂತೆ ತಾತ್ಕಾಲಿಕ ಗೋಡೆಗಳನ್ನೇ ನಿರ್ಮಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ, ಕಾನೂನು ಸುವ್ಯವಸ್ಥೆ ವಿಷಯ ಮುಂದಿಟ್ಟುಕೊಂಡು ಅಧಿಕಾರಿಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT