ಶನಿವಾರ, ಮೇ 8, 2021
19 °C

ಕೃಷಿ ಕಾಯ್ದೆ ಪ್ರತಿ ಸುಟ್ಟು'ಹೋಳಿ' ಆಚರಣೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನೂತನ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಹಾಕುವ ಮೂಲಕ ಭಾನುವಾರ ‘ಹೋಳಿಕಾ ದಹನ’ ಆಚರಿಸಿದರು ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಏ. 5ರಂದು ‘ಎಫ್‌ಸಿಐ ಬಚಾವೊ ದಿವಸ್‌’ ಹಮ್ಮಿಕೊಳ್ಳಲಾಗುವುದು. ದೇಶದಾದ್ಯಂತ ಇರುವ ಎಫ್‌ಸಿಐ ಕಚೇರಿಗಳಿಗೆ ಅಂದು ಬೆಳಿಗ್ಗೆ 11ರಿಂದ ಸಂಜೆ 5 ರವರೆಗೆ ಮುತ್ತಿಗೆ ಹಾಕಲಾಗುವುದು ಎಂದೂ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

‘ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಬೆಂಬಲ ಬೆಲೆಗೆ ಕಾನೂನಾತ್ಮಕ ರಕ್ಷಣೆ ನೀಡಬೇಕು ಎಂಬ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ರೈತರು ಹೋಳಿ ಆಚರಣೆ ವೇಳೆ ಪುನರುಚ್ಚರಿಸಿದರು’ ಎಂದೂ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು