ಶನಿವಾರ, ಜುಲೈ 2, 2022
20 °C

ದೆಹಲಿ ಚಲೊ: ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಕೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಪಂಜಾಬ್‌ನ ರೈತರು ನಡೆಸುತ್ತಿರುವ ‘ದೆಹಲಿ ಚಲೊ’ ಪ್ರತಿಭಟನಾ ಮೆರವಣಿಗೆ ತಡೆಯುವ ಪ್ರಯತ್ನ ನಡೆಸಲಾಗಿದೆ.

ದೆಹಲಿ-ಬಹದ್ದೂರ್‌ಗಢ ಹೆದ್ದಾರಿ ಬಳಿಯ ಟಿಕ್ರಿ ಗಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಬಳಸಿದ್ದಾರೆ.

ಪ್ರತಿಭಟನಾ ನಿರತ ರೈತರ ದೆಹಲಿ ಪ್ರವೇಶ ತಡೆಯಲು ಅಂಬಾಲಾ ಹತ್ತಿರದ ಹರಿಯಾಣ ಮತ್ತು ಪಂಜಾಬ್ ನಡುವಿನ ಶಂಭು ಗಡಿಯಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಒಂಬತ್ತು ಕ್ರೀಡಾಂಗಣಗಳನ್ನು ಕಾರಾಗೃಹಗಳನ್ನಾಗಿ ಪರಿವರ್ತಿಸಲು ಪೊಲೀಸರು ದೆಹಲಿ ಸರ್ಕಾರದ ಅನುಮತಿ ಕೋರಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸದಸ್ಯರು ಅಮೃತಸರದಿಂದ ದೆಹಲಿಗೆ ಹೊರಡಲು ಶುಕ್ರವಾರ ತಯಾರಿ ನಡೆಸಿದ್ದಾರೆ.

ನಾಲ್ಕೈದು ತಿಂಗಳಿಗೆ ಸಾಕಾಗುವಷ್ಟು ಆಹಾರ ಸಾಮಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಸಿಕೊಂಡು ನಾವೆಲ್ಲರೂ ದೆಹಲಿ ಕಡೆಗೆ ಹೋಗತ್ತಿದ್ದೇವೆ ಎಂದು ರೈತರು ತಿಳಿಸಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಹಲವು ಮೆಟ್ರೊ ರೈಲು ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು