ಸೋಮವಾರ, ಆಗಸ್ಟ್ 15, 2022
23 °C

ರೈತರ ಪ್ರತಿಭಟನೆ: ದೆಹಲಿ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರು ಜೈಪುರ –ದೆಹಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವ ಯೋಜನೆ ರೂಪಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಹರಿಯಾಣದ ಎಲ್ಲ ಗಡಿಭಾಗಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ದೆಹಲಿ ಪ್ರಮುಖ ಗಡಿ ಭಾಗದ ಪ್ರಮುಖ ಸ್ಥಳಗಳಲ್ಲಿ ಶನಿವಾರ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸಲಾಯಿತು. ಇದೇ ವೇಳೆ ಹೆದ್ದಾರಿಯಲ್ಲಿ ಸಾಗಲಿರುವ ಪ್ರಯಾಣಿಕರ ವಾಹನಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಜೈಪುರ್‌ – ದೆಹಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡುತ್ತೇವೆ‘ ಎಂಬ ರೈತರ ಘೋಷಣೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಗುರುಗ್ರಾಮಕ್ಕೆ ಹೋಗುವ ಈ ಹೆದ್ದಾರಿಯಲ್ಲಿ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ 17 ದಿನಗಳಿಂದ ದೆಹಲಿಯ ಸಿಂಘು, ಟಿಕ್ರಿ ಸೇರಿದಂತೆ ವಿವಿಧ ಗಡಿಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು