ನವದೆಹಲಿ: ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ ನಡೆದ ಎಂಟನೇ ಸುತ್ತಿನ ಮಾತುಕತೆಯೂ ಸಹ ಯಶಸ್ವಿಯಾಗಿಲ್ಲ.

9ನೇ ಸುತ್ತಿನ ಮಾತುಕತೆಯು ಜನವರಿ 15ರಂದು ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಶುಕ್ರವಾರ ನಡೆದ ಎಂಟನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಪಿಯೂಷ್ ಗೋಯಲ್ ಅವರು ಭಾಗವಹಿಸಿದ್ದರು.

ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಸರ್ಕಾರ ನಿರಾಕರಿಸುತ್ತಿದೆ. ಆದರೆ ಇವುಗಳಿಂದ (ಕಾಯ್ದೆಗಳಿಂದ) ನಮ್ಮ ಆದಾಯಕ್ಕೆ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜನವರಿ 26ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಗಣರಾಜ್ಯೋತ್ಸವದಂದು ದೆಹಲಿಗೆ ನುಗ್ಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಅದರಂತೆ ರಾಜಧಾನಿಯ ಹೊರವಲಯದಲ್ಲಿ ಗುರುವಾರ ಟ್ರಾಕ್ಟರ್ ತಾಲೀಮು ಆರಂಭವಾಗಿದೆ.

ಸೆಪ್ಟೆಂಬರ್ನಲ್ಲಿ ಸರ್ಕಾರ ಅಂಗೀಕರಿಸಿರುವ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಆದರೆ, ಅದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನಿರಾಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.