ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಹೋರಾಟಕ್ಕೆ ವರ್ಷ: ರೈತರ ತ್ಯಾಗ–ಬಿಜೆಪಿ ಅಹಂಕಾರ ತಿಳಿಸುವ ದಿನ ಎಂದ ಪ್ರಿಯಾಂಕಾ

Last Updated 26 ನವೆಂಬರ್ 2021, 6:24 IST
ಅಕ್ಷರ ಗಾತ್ರ

ನವದೆಹಲಿ: ರೈತರ ಸತ್ಯಾಗ್ರಹವು ಒಂದು ವರ್ಷ ಪೂರ್ಣಗೊಳಿಸಿದ್ದು ಈ ಪ್ರತಿಭಟನೆಯು ಬಿಜೆಪಿ ಸರ್ಕಾರದ ದುರಹಂಕಾರ ಮತ್ತು ಹುತಾತ್ಮರಾದ 700 ರೈತರ ತ್ಯಾಗವನ್ನು ನೆನಪಿಸಲಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾರ್ದಾ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿದ ರೈತರು ಕಳೆದ ವರ್ಷದ 26ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ವರ್ಷದ ರೈತರ ಸತ್ಯಾಗ್ರಹವು ರೈತರ ದೃಢ ನಿಲುವು ಮತ್ತು ಅನ್ನದಾತರ ಮೇಲೆ ಸರ್ಕಾರ ನಡೆಸಿದ ದೌರ್ಜನ್ಯವನ್ನು ನೆನಪಿಸುತ್ತದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಆದರೆ ಭಾರತದಲ್ಲಿ ರೈತರನ್ನು ಎಂದಿಗೂ ಕಡೆಗಣಿಸಲು ಸಾಧ್ಯವಿಲ್ಲ. ರೈತರ ಹೋರಾಟಕ್ಕೆ ಸಿಕ್ಕ ಗೆಲುವೇ ಇದಕ್ಕೆ ನಿದರ್ಶನ ಎಂದಿರುವ ಅವರು ‘ಜೈ ಕಿಸಾನ್‌’ ಘೋಷಣೆಯನ್ನೂ ಟ್ವೀಟ್‌ನಲ್ಲಿ ಸೇರಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡಿರುವುದಾಗಿ ಅಧಿಕೃತವಾಗಿ ಸಂಸತ್ತಿನಲ್ಲಿ ಘೋಣೆಯಾಗುವವರೆಗೂ ದೆಹಲಿಯ ಗಡಿಗಳಲ್ಲಿ ಹೋರಾಟ ಮುಂದುವರಿಯಲಿದೆ ಎಂದು ರೈತ ನಾಯಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT