ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಚಕ್ಕಾ ಜಾಮ್‌ ಬೆಂಬಲಿಸಿ ಪ್ರತಿಭಟಿಸಿದ 50 ಜನರ ಬಂಧನ

Last Updated 6 ಫೆಬ್ರುವರಿ 2021, 12:54 IST
ಅಕ್ಷರ ಗಾತ್ರ

ನವದೆಹಲಿ: ರೈತರ 'ಚಕ್ಕಾ ಜಾಮ್' ಬೆಂಬಲಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಧ್ಯ ದೆಹಲಿಯ ಶಾಹೀದಿ ಪಾರ್ಕ್ ಬಳಿ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು ಇಂದು (ಶನಿವಾರ) ದೇಶವ್ಯಾಪಿ 'ಚಕ್ಕಾ ಜಾಮ್‌' ಪ್ರತಿಭಟನೆಗೆ ಕರೆ ನೀಡಿದ್ದರು. ಇದಕ್ಕೆ ಬೆಂಬಲಿಸಿ ಮಧ್ಯ ದೆಹಲಿಯ ಶಾಹೀದಿ ಪಾರ್ಕ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 50 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಕ್ಕಾ ಜಾಮ್ ಕುರಿತು ಮಾಹಿತಿ ನೀಡಿದ್ದ ಟಿಕಾಯತ್, 'ಮೂರು ತಾಸುಗಳ ಕಾಲ ರಸ್ತೆ ದಿಗ್ಭಂಧನ ಹೇರಲಾಗುವುದು. ಇದು ದೆಹಲಿಯಲ್ಲಿ ನಡೆಯುವುದಿಲ್ಲ. ಆದರೆ ದೇಶದ ಇತರೆ ಭಾಗಗಳಲ್ಲಿ ಚಕ್ಕಾ ಜಾಮ್ ಹಮ್ಮಿಕೊಳ್ಳಲಾಗುವುದು. ಚಕ್ಕಾ ಜಾಮ್‌ನಲ್ಲಿ ಸಿಲುಕುವ ವಾಹನಗಳಿಗೆ ನೀರು ಹಾಗೂ ಆಹಾರ ಒದಗಿಸಲಾಗುವುದು. ಕಡಲೆಕಾಯಿಯಂತಹ ವಸ್ತುಗಳನ್ನು ಜನರಿಗೆ ವಿತರಿಸಲಾಗುವುದು. ಹಾಗೆಯೇ ಜನರಿಗೆ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಲಾಗುವುದು' ಎಂದು ಹೇಳಿದ್ದರು.

ಕಳೆದ ವರ್ಷ ನವೆಂಬರ್ 26ರಿಂದ ಆರಂಭವಾಗಿರುವ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್ ಟಿಕಾಯತ್ ಮುನ್ನಡೆಸುತ್ತಿದ್ದಾರೆ. ಈ ನಡುವೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಹಿಂಸಾಚಾರ ನಡೆದಿತ್ತು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಗಾಜಿಪುರ, ಟಿಕ್ರಿ ಹಾಗೂ ಸಿಂಘು ಪ್ರತಿಭಟನಾ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT