ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ: ಘಾಜಿಪುರ–ದೆಹಲಿ ನಡುವಿನ ಹೆದ್ದಾರಿ ಸಂಚಾರಕ್ಕೆ ಮುಕ್ತ

Last Updated 15 ಮಾರ್ಚ್ 2021, 5:53 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಮಚ್ಚಲ್ಪಟ್ಟಿದ್ದ ಘಾಜಿಪುರ–ದೆಹಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ದೆಹಲಿ–ಘಾಜಿಪುರ ನಡುವಿನ ರಾಷ್ಟ್ರೀಯ ಹೆದ್ದಾರಿ-24ನ್ನು ಸಂಚಾರಕ್ಕೆಮುಕ್ತಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಪ್ರದೇಶ ಹಾಗೂ ದೆಹಲಿ ಪೊಲೀಸರು ಈ ಬಗ್ಗೆ ಸಮಾಲೋಚನೆ ನಡೆಸಿ ಸಂಚಾರಕ್ಕೆ ಮುಕ್ತಗೊಳಿದ್ದಾರೆ.

ನಾಗರಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ ಗಡಿಯಲ್ಲಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜನವರಿ 26ರಂದು ದೆಹಲಿಯಲ್ಲಿ ನಡೆದ ಗಲಭೆಯ ಬಳಿಕ ಈ ಹೆದ್ದಾರಿಯನ್ನು ಮುಚ್ಚಲಾಗಿತ್ತು. ಇದೀಗ ಈ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ಪ್ರಮುಖ ಸಂಚಾರ ಕೊಂಡಿಯಾಗಿರುವ ಈ ಹೆದ್ದಾರಿ ಸರಕು ಸಾಗಣೆಗೆ ಹೆಚ್ಚು ಅನುಕೂಲಕರ ಮಾರ್ಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT