ಲಖನೌ: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು), ಉತ್ತರ ಪ್ರದೇಶದ ಮುಜಫ್ಫರ್‌ನಗರದಲ್ಲಿ ಭಾನುವಾರ ಭಾರಿ ಸಮಾವೇಶ ನಡೆಸಲು ಉದ್ದೇಶಿಸಿದೆ.
ಈ ಮಹಾಪಂಚಾಯಿತಿಯಲ್ಲಿ ಲಕ್ಷಾಂತರ ರೈತರು ಭಾಗವಹಿಸಲಿದ್ದಾರೆ ಎಂದು ಬಿಕೆಯು ಅಧ್ಯಕ್ಷ ನರೇಶ್ ಟಿಕಾಯತ್ ಹೇಳಿದ್ದಾರೆ. ಮುಜಫ್ಫರ್‌ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ.
ವಿವಿಧ ಜಾತಿ ಪಂಚಾಯಿತಿಗಳ ನಾಯಕರು ಉತ್ತರ ಪ್ರದೇಶದ ಗ್ರಾಮಗಳಿಗೆ ಭೇಟಿ ಕೊಟ್ಟು ಮಹಾಪಂಚಾಯಿತಿಗೆ ಜನರನ್ನು ಸೇರಿಸಲು ಯತ್ನಿಸುತ್ತಿದ್ದಾರೆ.
ಮುಜಫ್ಫರ್‌ನಗರದ ಮಹಾಪಂಚಾ ಯಿತಿಯು ದೇಶದ ಅತ್ಯಂತ ದೊಡ್ಡ ರೈತ ಸಮಾವೇಶ ಎನಿಸಿಕೊಳ್ಳಲಿದೆ ಎಂದು ಟಿಕಾಯತ್ ಅವರು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರಿಗೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ. ಉತ್ತರ ಪ್ರದೇಶದಾದ್ಯಂತ ‘ಕಿಸಾನ್ ಸಂಪರ್ಕ ಯಾತ್ರೆ’ ನಡೆಸಲು ಬಿಜೆಪಿ ಉದ್ದೇಶಿಸಿದೆ. ರೈತರ ಚಳವಳಿಯು ಪ್ರಬಲವಾಗಿರುವ ರಾಜ್ಯದ ಪಶ್ಚಿಮ ಭಾಗಕ್ಕೆ ಹೆಚ್ಚು ಗಮನ ನೀಡಲು ನಿರ್ಧರಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.