ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ ತೀವ್ರ: ಅಣ್ಣಾ ಹಜಾರೆ ಬೆಂಬಲ ನೀಡಲ್ಲ ಎಂದ ನಿತಿನ್ ಗಡ್ಕರಿ

Last Updated 15 ಡಿಸೆಂಬರ್ 2020, 6:30 IST
ಅಕ್ಷರ ಗಾತ್ರ

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಕೇಂದ್ರ ಸರ್ಕಾರವು ರೈತರಿಗೆ ವಿರುದ್ಧವಾಗಿ ಏನನ್ನೂ ಮಾಡಿಲ್ಲ. ರೈತರಿಗೆ ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಹಕ್ಕಿದೆ. ಅಣ್ಣಾ ಹಜಾರೆಯವರು ರೈತರ ಪ್ರತಿಭಟನೆ ಬೆಂಬಲಿಸಬಹುದು ಎಂದು ನಾನು ಭಾವಿಸುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ.

ರೈತರಿಗೆ ಖಂಡಿತವಾಗಿಯೂ ನ್ಯಾಯ ಸಿಗಲಿದೆ. ಸಮಸ್ಯೆ ಇತ್ಯರ್ಥವಾಗಬೇಕಿದೆ. ವಿಷಯವನ್ನು ರಾಜಕೀಯಗೊಳಿಸಬಾರದು. ಕೆಲವರು ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ. ರೈತರು ಮೂರು ಕೃಷಿ ಕಾಯ್ದೆಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಸಂವಹನ ಕೊರತೆಯು ತಪ್ಪು ಸಂದೇಶ, ವಿವಾದಕ್ಕೆ ಕಾರಣವಾಗಬಹುದು. ಮಾತುಕತೆ ನಡೆದಾಗ ಸಮಸ್ಯೆಗಳು ಪರಿಹಾರವಾಗುತ್ತವೆ. ರೈತರಿಗೂ ನ್ಯಾಯ ಹಾಗೂ ಪರಿಹಾರ ದೊರೆಯುತ್ತದೆ. ರೈತರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಗಡ್ಕರಿ ಹೇಳಿದ್ದಾರೆ.

ಪ್ರತಿಭಟನೆಗೆ ಮಹಿಳೆಯರ ಸಾಥ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 20ನೇ ದಿನಕ್ಕೆ ಕಾಲಿಟ್ಟಿದೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರೈತ ಕುಟುಂಬಗಳ ಸುಮಾರು ಎರಡು ಸಾವಿರ ಮಹಿಳೆಯರುೂ ಪ್ರತಿಭಟನೆಯಲ್ಲಿ ಕೈಜೋಡಿಸುವ ಸಾಧ್ಯತೆ ಇದೆ. ವಿವಿಧೆಡೆಗಳಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುವ ಮಹಿಳೆಯರಿಗಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿರುವುದಾಗಿ ರೈತ ನಾಯಕರು ತಿಳಿಸಿದ್ದಾರೆ. ಮಹಿಳೆಯರು ತಂಗಲು ಟೆಂಟ್‌ಗಳ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT