ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರವು ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆಗೆ ರೈತರನ್ನು ಆಹ್ವಾನಿಸಿದೆ.

ದೆಹಲಿ–ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ:ರೈತರ ಪ್ರತಿಭಟನೆ ಪರ ದೇಶದಾದ್ಯಂತ ದನಿ: ‘ಬಂದ್’ಗೆ ಭಾರಿ ಬೆಂಬಲ

ಈ ಮಧ್ಯೆ, ರೈತರು ನಾಳೆ (ಡಿ.8) ದೇಶದಾದ್ಯಂತ ಬಂದ್‌ಗೆ ಕರೆ ನೀಡಿದ್ದಾರೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ಎಲ್ಲ ಪ್ರತಿಪಕ್ಷಗಳೂ ಬಂದ್‌ಗೆ ಬೆಂಬಲ ಘೋಷಿಸಿವೆ.

ದೆಹಲಿಯ ಆಟೊ, ಟ್ಯಾಕ್ಸಿ ಸಂಘಟನೆ ಬೆಂಬಲ: ರೈತರು ಕರೆ ನೀಡಿರುವ ’ಭಾರತ ಬಂದ್’ಗೆ ದೆಹಲಿಯ ಕೆಲವು ಆಟೊ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಇತರ ಕೆಲವು ಸಂಘಟನೆಗಳು ಎಂದಿನಂತೆಯೇ ಕಾರ್ಯನಿರ್ವಹಿಸಲು ನಿರ್ಧರಿಸಿವೆ.

ಈ ಮಧ್ಯೆ, ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಪ್ರದೇಶಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಸಂಪುಟದ ಇತರ ಕೆಲವು ಸಚಿವರೂ ಕೇಜ್ರಿವಾಲ್ ಜತೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.