ಮಂಗಳವಾರ, ಆಗಸ್ಟ್ 16, 2022
22 °C

ದೇಶದ ಎಲ್ಲ ರೈತ ಸಂಘಗಳನ್ನು ಆಹ್ವಾನಿಸದೆ ಮಾತುಕತೆಗೆ ಬರಲ್ಲ: ರೈತರ ಉತ್ತರ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Farmers protest ANI image

ನವದೆಹಲಿ: ಮಾತುಕತೆಗೆ ಕರೆಯುವುದಾದರೆ ದೇಶದಲ್ಲಿರುವ ಎಲ್ಲ ರೈತ ಸಂಘಟನೆಗಳನ್ನು ಆಹ್ವಾನಿಸಬೇಕು. ಇಲ್ಲದಿದ್ದರೆ ಚರ್ಚೆಗೆ ಬರುವುದಿಲ್ಲ ಎಂದು ‘ಪಂಜಾಬ್ ರೈತ ಸಂಘರ್ಷ ಸಮಿತಿ’ಯು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯಿಸಿದೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಐದು ದಿನಗಳಿಂದ ದೆಹಲಿ ಹೊರ ವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಸರ್ಕಾರ ಚರ್ಚೆಗೆ ಆಹ್ವಾನಿಸಿದ ಬೆನ್ನಲ್ಲೇ ಸಮಿತಿಯು ಈ ಪ್ರತಿಕ್ರಿಯೆ ನೀಡಿದೆ.

‘ದೇಶದಲ್ಲಿ 500ಕ್ಕೂ ಹೆಚ್ಚು ರೈತ ಸಂಘಟನೆಗಳಿವೆ. ಆದರೆ ಸರ್ಕಾರ ಕೇವಲ 32 ಸಂಘಟನೆಗಳನ್ನು ಮಾತುಕತೆಗೆ ಕರೆದಿದೆ. ಎಲ್ಲ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸದಿದ್ದರೆ ನಾವೂ ಹೋಗುವುದಿಲ್ಲ’ ಎಂದು ‘ಪಂಜಾಬ್ ರೈತ ಸಂಘರ್ಷ ಸಮಿತಿ’ಯ ಜಂಟಿ ಕಾರ್ಯದರ್ಶಿ ಸುಖ್‌ವಿಂದರ್ ಎಸ್ ಸಭರನ್ ಹೇಳಿದ್ದಾರೆ.

ಇದನ್ನೂ ಓದಿ: 

ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಚಳಿ ಮತ್ತು ಕೋವಿಡ್‌-19 ಅನ್ನು ಗಮನದಲ್ಲಿಟ್ಟುಕೊಂಡು ಡಿಸೆಂಬರ್ 3ಕ್ಕಿಂತಲೂ ಮೊದಲೇ ನಾವು ರೈತ ಸಂಘಗಳ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದ್ದೇವೆ ಎಂದು ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು