ಗುರುವಾರ , ಆಗಸ್ಟ್ 11, 2022
20 °C

ಸೂಟು ಬೂಟು ಸರ್ಕಾರ ರೈತರ ಆದಾಯವನ್ನು ಅರ್ಧದಷ್ಟು ಇಳಿಸಿದೆ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ಸೂಟು ಬೂಟು ಸರ್ಕಾರದ ಅಡಿಯಲ್ಲಿ ರೈತರ ಅದಾಯ ಅರ್ಧದಷ್ಟು ಇಳಿಕೆಯಾಗಿದೆ, ಆದರೆ ಸರ್ಕಾರದ ಆಪ್ತ ಸ್ನೇಹಿತರ ಆದಾಯ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ದೂರಿದ್ದಾರೆ.

ರೈತರು ಮತ್ತು ಕೃಷಿ ಕಾರ್ಮಿಕರ ವಿರುದ್ಧವಾಗಿರುವ ಮೂರು 'ಕರಾಳ' ಕೃಷಿ ಕಾನೂನುಗಳನ್ನು ಸರ್ಕಾರ ರದ್ದುಪಡಿಸಬೇಕು ಮತ್ತು ಉತ್ತಮ ವಾಕ್ಚಾತುರ್ಯದಿಂದ ರೈತರನ್ನು ಮೋಸಗೊಳಿಸದಿರಿ ಎಂದು ಹೇಳಿದ್ದಾರೆ.

ಕೇಂದ್ರದ ಹೊಸ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣದ ರೈತರು ರಾಷ್ಟ್ರ ರಾಜಧಾನಿಯ ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ರಾಹುಲ್ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಅವರು (ಸರ್ಕಾರ) ಹೇಳಿದ್ದರು, ಆದರೆ ಅವರು ಮಾಡಿದ್ದೇನೆಂದರೆ (ಅವರ) 'ಸ್ನೇಹಿತರ' ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿದರು ಮತ್ತು ರೈತರ ಆದಾಯವನ್ನು ಅರ್ಧದಷ್ಟು ಇಳಿಸಿದ್ದಾರೆ. ಇದು ಸೂಟು-ಬೂಟು, ಸುಳ್ಳು ಮತ್ತು ಲೂಟಿಯ ಸರ್ಕಾರವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ರೈತರ ಪ್ರತಿಭಟನೆ ವೇಳೆ ಪೊಲೀಸರು ಜಲ ಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದು, ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸಲು ತಮ್ಮ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಆಡುತ್ತಿರುವ ಭಾಷಣವಿದೆ.

ಮತ್ತೊಂದು ಟ್ವೀಟ್‌ ಮಾಡಿರುವ ಅವರು, ಮೋದಿ ಸರ್ಕಾರವು 'ಸುಳ್ಳು' (ವಾಕ್ಚಾತುರ್ಯ) ಭರವಸೆ ನೀಡುವುದನ್ನು ನಿಲ್ಲಿಸಿ, ಅಪ್ರಮಾಣಿಕತೆ ಮತ್ತು ದೌರ್ಜನ್ಯವನ್ನು ನಿಲ್ಲಿಸಿ, ಸುಳ್ಳು ಹೇಳುವುದನ್ನು ಬಿಡಲಿ ಮತ್ತು ರೈತರು ಮತ್ತು ಕಾರ್ಮಿಕರ ವಿರುದ್ಧವಿರುವ ಮೂರು ಕೃಷಿಯ ಕರಾಳ ಕಾನೂನುಗಳನ್ನು ರದ್ದುಗೊಳಿಸಲಿ ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾನಿರತ ರೈತರ ಮೇಲೆ ಸರ್ಕಾರವು ಬಲಪ್ರಯೋಗ ಮಾಡುತ್ತಿರುವುದರ ವಿರುದ್ದ ಕಾಂಗ್ರೆಸ್ ಕಿಡಿಕಾರಿದ್ದು, ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಮತ್ತು ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು