ಸೋಮವಾರ, ಮಾರ್ಚ್ 1, 2021
17 °C

ರೈತರ ಜತೆ 10ನೇ ಸುತ್ತಿನ ಮಾತುಕತೆ ಬುಧವಾರಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹೊಸ ಕೃಷಿ ಕಾಯ್ದೆ ಕುರಿತು ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳ ನಡುವಣ 10ನೇ ಸುತ್ತಿನ ಮಾತುಕತೆಯನ್ನು ಇದೇ 20ಕ್ಕೆ (ಬುಧವಾರ) ಮುಂದೂಡಲಾಗಿದೆ.

ಆದಷ್ಟು ಬೇಗ ಬಿಕ್ಕಟ್ಟನ್ನು ಬಗೆಹರಿಸಲು ಎರಡೂ ಕಡೆಯವರು ನಿರ್ಧರಿಸಿದ್ದಾರೆ ಆದರೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರುವವರ ಮಧ್ಯಪ್ರವೇಶದಿಂದಾಗಿ ಇದು ವಿಳಂಬ ಆಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಾತುಕತೆಯು ಜನವರಿ 19ಕ್ಕೆ ಬದಲು ಜನವರಿ 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ನಡೆಯಲಿದೆ ಎಂದು ಕೃಷಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಬಿಕ್ಕಟ್ಟನ್ನು ಇತ್ಯರ್ಥಪಡಿಸಲು ಸುಪ್ರೀಂಕೋರ್ಟ್‌ ನೇಮಕ ಮಾಡಿರುವ ಸಮಿತಿಯು ತನ್ನ ಮೊದಲ ಸಭೆಯನ್ನು ಮಂಗಳವಾರ ನಡೆಸಲಿದೆ.

‘ಅನಿವಾರ್ಯ ಕಾರಣಗಳಿಂದ ಸಭೆ ಮುಂದಕ್ಕೆ ಹೋಗಿದೆ. ನೀವು ಸಭೆಯಲ್ಲಿ ಭಾಗವಹಿಸಬೇಕು‘ ಎಂದು ಕೃಷಿ ಸಚಿವಾಲಯದ ಕಾರ್ಯದರ್ಶಿ ಸಂಜಯ್‌ ಅಗರ್‌ವಾಲ್‌ ಅವರು 40 ರೈತಸಂಘಟನೆಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು