ಶನಿವಾರ, ಜನವರಿ 23, 2021
21 °C

ರೈತರ ಟ್ರ್ಯಾಕ್ಟರ್ ರ‍್ಯಾಲಿ: ದೆಹಲಿ ಹೊರ ವಲಯದಲ್ಲಿ ಟ್ರಾಫಿಕ್‌ ಜಾಮ್‌ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರೈತರು ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಿದ್ದು ದೆಹಲಿಯ ಹೊರ ವಲಯದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನದ ಕಾರಣ, ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯನ್ನು ಬುಧವಾರದಿಂದ ಗುರುವಾರಕ್ಕೆ ಮುಂದೂಡಿದ್ದರು. 

ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ ಸಾವಿರಾರು ರೈತರು ಕುಂಡಲಿ–ಮನೇಸರ್–ಪಲ್ವಾಲ್ ಹೆದ್ದಾರಿವರೆಗೆ  ಟ್ರ್ಯಾಕ್ಟರ್ ರ‍್ಯಾಲಿ ನಡೆಯಲಿದೆ  ಎಂದು ರೈತ ಮುಖಂಡರು ಮಾಹಿತಿ ನೀಡಿದ್ದಾರೆ. 

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆಯಾಗುತ್ತಿದ್ದರಿಂದ ರ‍್ಯಾಲಿಯನ್ನು ಒಂದು ದಿನ ಮುಂದೂಡಲಾಗಿದೆ ಎಂದು ಸ್ವರಾಜ್ ಅಭಿಯಾನದ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ. 

ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ರೈತ ಮುಖಂಡರು ಪುನರುಚ್ಚರಿಸಿದ್ದಾರೆ.

ಜನವರಿ 26ರಂದು ಹಮ್ಮಿಕೊಂಡಿರುವ ಮತ್ತೊಂದು ಟ್ರ್ಯಾಕ್ಟರ್ ರ‍್ಯಾಲಿ ಬಗ್ಗೆಯೂ ರೈತರ ನಾಯಕರು ಮಾಹಿತಿ ಹಂಚಿಕೊಂಡಿದ್ದಾರೆ. ‘ಹರಿಯಾಣದ ಪ್ರತಿ ಮನೆಯಿಂದ ಒಬ್ಬರು, ಪ್ರತಿ ಹಳ್ಳಿಯಿಂದ 10 ಟ್ರ್ಯಾಕ್ಟರ್ ಹಾಗೂ ಪ್ರತಿ ಊರಿನಿಂದ 11 ಮಹಿಳೆಯರು ರ‍್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ’ ಎಂದು ಮುಖಂಡ ಜೋಗಿಂದರ್ ನೇನ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು