ನೋಯ್ಡಾ–ದೆಹಲಿ ರಸ್ತೆಯಲ್ಲಿ ಜಮಾಯಿಸಿದ ಉತ್ತರ ಪ್ರದೇಶದ ರೈತರು
ದೆಹಲಿ, ಉತ್ತರ ಪ್ರದೇಶ ಸಂಪರ್ಕಿಸುವ ಮಾರ್ಗಗಳನ್ನು ಬಂದ್ ಮಾಡಲು ಮುಂದಾದ ರೈತರು

ನೋಯ್ಡಾ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗಗಳಲ್ಲಿ ರೈತರ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭನಾಕಾರರು ಬುಧವಾರ ದೆಹಲಿ ಮತ್ತು ಉತ್ತರ ಪ್ರದೇಶ ಸಂಪರ್ಕಿಸುವ ಪ್ರಮುಖ ದಾರಿಗಳನ್ನು ಬಂದ್ ಮಾಡಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ – ನೋಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ– ಪಂಜಾಬ್ ರೈತರು ಆರಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜಧಾನಿಯತ್ತ ಹೊರಟಿದ್ದಾರೆ.
ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುವ ಪ್ರಯಾಣಿಕರು ಚಿಲ್ಲಾ ಮಾರ್ಗದ ಬದಲಿಗೆ ಕಾಲಿಂದ್ ಕುಂಜ್ ಅಥವಾ ಡಿಎನ್ಡಿ ಮಾರ್ಗದ ಮೂಲಕ ಪ್ರಯಾಣಿಸುವಂತೆ ಸಲಹೆ ನೀಡುತ್ತಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.