ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಪಿಗೆ ಕಾನೂನು ಖಾತರಿ ನೀಡಿ

ಜಂತರ್‌ ಮಂತರ್‌ನಲ್ಲಿ ರೈತರ ಪ್ರತಿಭಟನೆ
Last Updated 9 ಡಿಸೆಂಬರ್ 2022, 14:34 IST
ಅಕ್ಷರ ಗಾತ್ರ

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಮತ್ತು ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನಡೆದ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ ನೇತೃತ್ವದಲ್ಲಿ ರೈತರು ಶುಕ್ರವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವರ್ಷಕ್ಕೂ ಹೆಚ್ಚು ಕಾಲ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಸ್ಥಗಿತಗೊಳಿಸಿದ ಬಳಿಕಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ಆಗ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಿಸಾನ್‌ ಕಾಂಗ್ರೆಸ್ ಆರೋಪಿಸಿದೆ.

ಪ್ರತಿಭಟನಕಾರರನ್ನು ಉದ್ದೇಶಿಸಿದ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ, ಕಳೆದ ವರ್ಷ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು.

ಈ ಪ್ರತಿಭಟನೆ ಜಂತರ್ ಮಂತರ್‌ಗೆ ಮಾತ್ರ ಸೀಮಿತವಾಗಬಾರದು. ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಮತ್ತು ರಾಷ್ಟ್ರಕ್ಕೆ ಆಹಾರ ನೀಡುವ ರೈತರ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೂ ಹೋರಾಡುವ ಧೈರ್ಯವನ್ನು ಕಳೆದುಕೊಂಡಿಲ್ಲ. ಎಂಎಸ್‌ಪಿ ಕಾನೂನು ಜಾರಿಗೊಳಿಸುವ ಭರವಸೆ ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಪಕ್ಷದ ನಾಯಕಿ ಅಲ್ಕಾ ಲಾಂಬಾ ಹೇಳಿದ್ದಾರೆ.

ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆ ಮುಗಿದು ಒಂದು ವರ್ಷ ಕಳೆದಿದೆ. ಆದರೆ, ರೈತರಿಗೆ ಎಂಎಸ್‌ಪಿ ಖಾತ್ರಿಪಡಿಸುವ ಸರ್ಕಾರದ ಭರವಸೆ ಇನ್ನೂ ಈಡೇರಿಲ್ಲ ಎಂದುಎಐಕೆಸಿ ಜಂಟಿ ಸಂಯೋಜಕ ಹರ್ಗೋಬಿಂದ್ ಸಿಂಗ್ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT