ಭಾನುವಾರ, ಫೆಬ್ರವರಿ 28, 2021
31 °C
ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ದೆಹಲಿ ಹಿಂಸಾಚಾರ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣೆಗೆ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ‌: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಸಂಭವಿಸಿದ ಹಿಂಸಾಚಾರದ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.‌

ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ, ಹೈಕೋರ್ಟ್‌ನ  ಇಬ್ಬರು ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಬೇಕು. ಈ ಸಮಿತಿ ನಿಗದಿತ ಅವಧಿಯಲ್ಲಿ ಘಟನೆಯ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.

ಟ್ರ್ಯಾಕ್ಟರ್ ರ‍್ಯಾಲಿ ನಡೆದ ದಿನದಂದು ಹಿಂಸಾಚಾರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವಂತಹ ಘಟನೆಗಳಿಗೆ ಕಾರಣವಾದ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸೂಕ್ತ ಕಲಂಗಳ ಅಡಿ ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡುವಂತೆ ವಿಶಾಲ್ ಅರ್ಜಿಯಲ್ಲಿ ಕೋರಿದ್ದಾರೆ.

ಈ ಘಟನೆಯಲ್ಲಿ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ನೂರಾರು ಪೊಲೀಸರು ಗಾಯಗೊಂಡಿದ್ದಾರೆ. ಇದೇ ವೇಳೆ ಸರ್ಕಾರ ದೆಹಲಿಯಾದ್ಯಂತ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಿತ್ತು. ಈ ಎಲ್ಲ ಬೆಳವಣಿಗೆಗಳು ಸಾರ್ವಜನಿಕ ಜೀವನದ ಮೇಲೆ ತೀವ್ರ ಪರಿಣಾಮಬೀರಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಘಟನೆಗೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಈ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ, ಅದರಿಂದ ತನಿಖೆ ನಡೆಸಬೇಕು‘ ಮನವಿಯಲ್ಲಿ ಕೋರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು