ಭಾನುವಾರ, ಸೆಪ್ಟೆಂಬರ್ 19, 2021
30 °C

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆ‍ಪಿ ವಿರುದ್ಧ ರೈತರ ಮತ: ಅಖಿಲೇಶ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ವಾಗ್ದಾಳಿ ನಡೆಸಿದರು.

‘ಉತ್ತರ ಪ್ರದೇಶದಲ್ಲಿ ರೈತರೊಂದಿಗೆ ಸಂಪರ್ಕ ಸಾಧಿಸಲು ಬಿಜೆಪಿ ‘ಕಿಸಾನ್‌ ಸಮ್ಮೇಳನ’ ನಡೆಸಲು ಮುಂದಾಗಿದೆ. ‘ಅನ್ನದಾತ’, ಮತದಾರನಾಗುವ ಸಮಯ ಬಂದಾಗ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಬಿಜೆಪಿಯ ಈ ಜಾಲಕ್ಕೆ ರೈತರು ಬೀಳುವುದಿಲ್ಲ’ ಎಂದು ಅವರು ಹೇಳಿದರು.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಇದೇ 16ರಿಂದ 23ರ ತನಕ ‘ಕಿಸಾನ್‌ ಸಂವಾದ’ ಕಾರ್ಯಕ್ರಮವನ್ನು ಏರ್ಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು