ಭಾನುವಾರ, ಅಕ್ಟೋಬರ್ 24, 2021
21 °C

ಲಖಿಂಪುರ ಹಿಂಸಾಚಾರ: ನ್ಯಾಯದ ಹೋರಾಟದಲ್ಲಿ ರೈತರು ಗೆಲ್ಲುತ್ತಾರೆ- ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ-ಖೇರಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಿಂದಾಗಿ ರೈತರು ಮೃತಪಟ್ಟಿರುವ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯಕ್ಕಾಗಿ ಹೋರಾಡುತ್ತಿರುವ ರೈತರು ಈ ಹೋರಾಟವನ್ನು ಗೆದ್ದೆ ಗೆಲ್ಲುತ್ತಾರೆ ಎಂದು ಸೋಮವಾರ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಮೃತಪಟ್ಟ ರೈತ ಕುಟುಂಬಗಳ ಭೇಟಿಗೆ ತೆರಳಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಹುಲ್, ಅಧಿಕಾರದಲ್ಲಿರುವವರು ಆಕೆಯ ಧೈರ್ಯಕ್ಕೆ ಹೆದರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ಪಕ್ಷದ ನಾಯಕರನ್ನು ಸೋಮವಾರ ವಶಕ್ಕೆ ಪಡೆದಿದ್ದು, ಸೀತಾಪುರದ ಸರ್ಕಾರಿ ವಸತಿ ಗೃಹದಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹಿಂಸಾಚಾರದ ಸಂತ್ರಸ್ತರನ್ನು ಭೇಟಿಯಾಗಲು ಅವರಿಗೆ ಬಿಜೆಪಿ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಕ್ಷ ಆರೋಪಿಸಿದೆ.

'ಪ್ರಿಯಾಂಕಾ, ನೀವು ಹಿಮ್ಮೆಟ್ಟುವುದಿಲ್ಲ ಎಂದು ನನಗೆ ತಿಳಿದಿದೆ. ಅವರು ನಿಮ್ಮ ಧೈರ್ಯವನ್ನು ನೋಡಿ ಹೆದರುತ್ತಿದ್ದಾರೆ. ದೇಶದ 'ಅನ್ನದಾತರು' ನ್ಯಾಯಕ್ಕಾಗಿ ನಡೆಸುತ್ತಿರುವ ಈ ಅಹಿಂಸಾತ್ಮಕ ಹೋರಾಟದಲ್ಲಿ ಗೆದ್ದೆ ಗೆಲ್ಲುತ್ತಾರೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ' ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ, 'NoFear' ಎಂಬ ಹ್ಯಾಶ್‌ಟ್ಯಾಗ್ ಕೂಡ ಹಾಕಿದ್ದಾರೆ.

ದೇಶದಲ್ಲಿ ರೈತರನ್ನು ತುಳಿಯುವ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

'ಬಿಜೆಪಿ ಸರ್ಕಾರ ದೇಶದಲ್ಲಿ ರೈತರನ್ನು ತುಳಿಯುವ ಮತ್ತು ಅವರನ್ನು ಮುಗಿಸುವ ರಾಜಕೀಯವನ್ನು ಮಾಡುತ್ತಿದೆ' ಎಂದು ಆರೋಪಿಸಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 

'ಈ ದೇಶವು ರೈತರದ್ದೇ ಹೊರತು ಬಿಜೆಪಿಯದ್ದಲ್ಲ' ಎಂದು ಆರೋಪಿಸಿ ಅವರು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದು, 'ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ರೈತರ ನೋವನ್ನು ಹಂಚಿಕೊಳ್ಳಲು ತಾನು ಲಖಿಂಪುರಕ್ಕೆ ಹೋಗುತ್ತಿದ್ದೇನೆ ಮತ್ತು ಅದು ಯಾವುದೇ ಅಪರಾಧ ಅಥವಾ ತಪ್ಪಲ್ಲ' ಎಂದು ಅವರು ಹೇಳಿದ್ದಾರೆ.

ಇನ್ನಷ್ಟು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು