ಭಾನುವಾರ, ನವೆಂಬರ್ 29, 2020
25 °C

ಜೆಕೆಸಿಎ ಹಣ ದುರುಪಯೋಗ ಪ್ರಕರಣ: ಮತ್ತೆ ಇಡಿ ಎದುರು ಫಾರೂಕ್ ಅಬ್ದುಲ್ಲಾ ಹಾಜರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೇಷನ್‌ನಲ್ಲಿ(ಜೆಕೆಸಿಎ) ನಡೆದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಜಾರಿ ನಿರ್ದೇಶನಾಲಯದ ಎದುರು ಹಾಜರಾದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅವರು ಈ ವಾರದಲ್ಲಿ ಎರಡನೇ ಬಾರಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು  ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರು ತಾಸು ಪ್ರಶ್ನಿಸಿದ್ದಾರೆ. ’ಈ ಘಟನೆ ಬಗ್ಗೆ ನಾನು ಚಿಂತಿಸುತ್ತಿಲ್ಲ. ತನಿಖೆಗೆ ಸಹಕರಿಸುತ್ತಿದ್ದೇನೆ’ ಎಂದು ಸೋಮವಾರ ಇಡಿ ಎದುರು ಹಾಜರಾದ ನಂತರ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಅವರ ಹೇಳಿಕೆ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು