ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ಮುಟ್ಟುಗೋಲಿಗೆ ಆಕ್ಷೇಪ: ನ್ಯಾಯಾಲಯ ಮೊರೆ ಹೋದ ಫಾರೂಕ್‌ ಅಬ್ದುಲ್ಲಾ

ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಕ್ಕೆ ಆಕ್ಷೇಪ
Last Updated 5 ಮಾರ್ಚ್ 2021, 11:44 IST
ಅಕ್ಷರ ಗಾತ್ರ

ಶ್ರೀನಗರ: ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಸಂಸದ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದ ವರ್ಷ ಡಿಸೆಂಬರ್‌ 19ರಂದು ಫಾರೂಕ್‌ ಅಬ್ದುಲ್ಲಾಗೆ ಸೇರಿದ ಶ್ರೀನಗರ, ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿರುವ ಮೂರು ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿತ್ತು.

ಜತೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿನ ಜಮೀನುಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲ ಆಸ್ತಿಗಳ ಮಾರುಕಟ್ಟೆ ಮೌಲ್ಯ ₹60ರಿಂದ 70 ಕೋಟಿ ಎಂದು ಅಂದಾಜಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ಗೆ ಫಾರುಕ್‌ ಅಬ್ದುಲ್ಲಾ ಅವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

‘ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿಯನ್ನು ಮೀರಿ ನಮ್ಮ ಪೂರ್ವಜರಿಂದ ದೊರೆತ ಮತ್ತು ಕುಟುಂಬದ ಆಸ್ತಿಯನ್ನು ಕಾನೂನುಬಾಹಿರವಾಗಿ ಮುಟ್ಟುಗೋಲು ಹಾಕಿಕೊಂಡಿದೆ’ ಎಂದು ಫಾರೂಕ್‌ ಅಬ್ದುಲ್ಲಾ ಅವರು ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT