ಗುರುವಾರ , ನವೆಂಬರ್ 26, 2020
21 °C

ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ನಿರ್ಬಂಧ: ಎನ್‌ಸಿ ಆಕ್ಷೇಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ‘ಮಿಲಾದ್‌–ಉನ್‌–ನಬಿ ಆಚರಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಹಝರತ್‌ಬಲ್ ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ತಮ್ಮ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಅಧಿಕಾರಿಗಳು ನಿವಾಸದಿಂದ ಹೊರ ಹೋಗದಂತೆ ತಡೆದಿದ್ದಾರೆ' ಎಂದು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷ ಆರೋಪಿಸಿದೆ.

‘ಜಮ್ಮ ಮತ್ತು ಕಾಶ್ಮೀರ ಸರ್ಕಾರದ ಅಧಿಕಾರಿಗಳು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್‌ಬಲ್‌ ದರ್ಗಾಕ್ಕೆ ತೆರಳದಂತೆ ತಡೆಯೊಡ್ಡಿದ್ದಾರೆ. ಮಿಲಾದ್‌–ಉನ್‌–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ‘ ಎಂದು ಜೆಕೆಎನ್‌ಸಿ ಪಕ್ಷ ಟ್ವಿಟರ್‌‌ನಲ್ಲಿ ಆರೋಪಿಸಿದೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಡಳಿತದ ಯಾವುದೇ ಅಧಿಕಾರಿ ಸಂಪರ್ಕಕ್ಕೆ ಲಭ್ಯವಾಗಿಲ್ಲ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು