ನವದೆಹಲಿ: 2021ರ ಜನವರಿ 1ರಿಂದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಟೋಲ್ ಕೇಂದ್ರಗಳಲ್ಲಿ ಡಿಜಿಟಲ್ ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶ ಕೊಡುವ ಫಾಸ್ಟ್ಯಾಗ್ ವ್ಯವಸ್ಥೆಯನ್ನು 2016ರಲ್ಲಿ ಆರಂಭಿಸಲಾಗಿತ್ತು.

2021ರ ಜನವರಿ 1ರಿಂದ ಫಾಸ್ಟ್ಯಾಗ್ ಕಡ್ಡಾಯ ಎಂಬ ಅಧಿಸೂಚನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ನವೆಂಬರ್ನಲ್ಲಿಯೇ ಹೊರಡಿಸಿತ್ತು. ನಾಲ್ಕು ಚಕ್ರಗಳ ಎಲ್ಲ ವಾಹನಗಳ ನೋಂದಣಿಗೆ 2017ರ ಡಿಸೆಂಬರ್ 1ರಿಂದಲೇ ಫಾಸ್ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈಗ, 2017ರ ಡಿಸೆಂಬರ್ಗೂ ಮೊದಲು ಮಾರಾಟವಾದ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯವಾಗಲಿದೆ.

ವಿಮೆ ನವೀಕರಣಕ್ಕೂ ಫಾಸ್ಟ್ಯಾಗ್ ಅನ್ನು ಕಡ್ಡಾಯಗೊಳಿಸಲಾಗಿದೆ. ಅದು 2021ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.