ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಕಾಡುತ್ತಿದೆ: ಕೇಜ್ರಿವಾಲ್

Last Updated 18 ಸೆಪ್ಟೆಂಬರ್ 2022, 9:08 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಕಾಡುತ್ತಿದೆ. ಹಾಗಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಹೆಸರಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ನಾಶಗೊಳಿಸಲು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಎಎಪಿ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೊದಲ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಮೋದಿ ಸರ್ಕಾರವು ತನ್ನ ಪಕ್ಷದ ಸಚಿವರು ಹಾಗೂ ಮುಖಂಡರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ. ಏಕೆಂದರೆ ಗುಜರಾತ್‌ನಲ್ಲಿ ಎಎಪಿಯ ಬೆಳೆದು ಬರುತ್ತಿರುವ ಜನಪ್ರಿಯತೆಯನ್ನು ಬಿಜೆಪಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಗುಜರಾತ್‌ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಗುಜರಾತ್‌ ವಿಧಾನಸಭೆ ಚುನಾವಣೆ ವರ್ಷಾಂತ್ಯದ ವೇಳೆಗೆ ನಡೆಯುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT