ಶುಕ್ರವಾರ, ಜನವರಿ 21, 2022
30 °C

ಮನಮೋಹನ ಸಿಂಗ್‌ ದೂರದೃಷ್ಟಿಯ ನಾಯಕ: ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ದೇಶದ ಸ್ಥಿತಿ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಅವರಿಂದ ಕಲಿಯುವುದು ಬಹಳಷ್ಟಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾನುವಾರ 89ನೇ ವಸಂತಕ್ಕೆ ಕಾಲಿಟ್ಟಿಗೆ ಮನಮೋಹನ್‌ ಸಿಂಗ್ ಅವರಿಗೆ ಶುಭಾಶಯ ಕೋರಿದ್ದು, ಫೇಸ್‌ಬುಕ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

‘ಸಿಂಗ್ ಅವರು ದೂರದೃಷ್ಟಿಯುಳ್ಳ, ದೇಶಭಕ್ತ. ಮಾತಿನಂತೆ ನಡೆಯುವವರು. ಭಾರತಕ್ಕೆ ನಾಯಕರಾಗಲು ನಿಜವಾದ ಅರ್ಹತೆಯುಳ್ಳ ವ್ಯಕ್ತಿ’ ಎಂದು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. 

‘ನಿಮ್ಮನ್ನು ಮತ್ತು ನಿಮ್ಮ ಕೊಡುಗೆಗಳನ್ನು ಕಾಂಗ್ರೆಸ್‌ ಪಕ್ಷ ಮತ್ತು ಇಡೀ ರಾಷ್ಟ್ರ ಗೌರವಿಸುತ್ತದೆ. ನಿಮ್ಮ ಎಲ್ಲ ಕಾರ್ಯಗಳಿಗೂ ಧನ್ಯವಾದಗಳು’ ಎಂದು ಕಾಂಗ್ರೆಸ್‌ ಪಕ್ಷ ತನ್ನ ಟ್ವೀಟ್‌ನಲ್ಲಿ ಹೇಳಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿರಿಯ ನಾಯಕರಾದ ಸಚಿನ್ ಪೈಲಟ್, ಮುಕುಲ್ ವಾಸ್ನಿಕ್, ಸಲ್ಮಾನ್ ಖುರ್ಷಿದ್ ಸೇರಿದಂತೆ ಇತರರೂ ಶುಭಾಶಯ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು