ಭಾನುವಾರ, ಏಪ್ರಿಲ್ 2, 2023
33 °C

ಹರಿಯಾಣ ಡಿಎಸ್​ಪಿ ಮಾದರಿಯಲ್ಲೇ ಜಾರ್ಖಂಡ್​ ಮಹಿಳಾ ಪಿಎಸ್​ಐ ಹತ್ಯೆ?: ಆರೋಪಿ ಬಂಧನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ರಾಂಚಿ: ಹರಿಯಾಣದ ನೂಹ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿವೈಎಸ್‌ಪಿಯೊಬ್ಬರ ಮೇಲೆ ಟ್ರಕ್‌ ಹರಿಸಿ ಹತ್ಯೆ ಮಾಡಿದ ಬೆನ್ನಲ್ಲೇ ಅಂತಹದೇ ಮತ್ತೊಂದು ಕೃತ್ಯ ಜಾರ್ಖಂಡ್​ನಲ್ಲಿ ವರದಿಯಾಗಿದೆ. 

ಮಂಗಳವಾರ ರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಪಿಎಸ್​ಐ ಸಂಧ್ಯಾ ಟೋಪ್ನೋ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. 

ಸಂಧ್ಯಾ ಅವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ. 

ಹರಿಯಾಣದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಡಿಎಸ್‌ಪಿ ಮೇಲೆ ಟ್ರಕ್​ ಹತ್ತಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಓದಿ... ಹರಿಯಾಣ: ಅಕ್ರಮ ಕಲ್ಲು ಗಣಿಗಾರಿಕೆ, ಟ್ರಕ್‌ ಹರಿಸಿ ಡಿವೈಎಸ್‌ಪಿ ಹತ್ಯೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು