ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರದ ಚಿತ್ತೂರಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 14 ಜನ ಆಸ್ಪತ್ರೆಗೆ ದಾಖಲು

Last Updated 21 ಆಗಸ್ಟ್ 2020, 1:26 IST
ಅಕ್ಷರ ಗಾತ್ರ

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರಿನ ಪುಟಲಪಟ್ಟು ಎಂಬಲ್ಲಿನ ಹಾಲು ಸಂಸ್ಕರಣಾ ಘಟಕದಲ್ಲಿ ಗುರುವಾರ ಸಂಜೆ ಅಮೋನಿಯಾ ಅನಿಲ ಸೋರಿಕೆ ಉಂಟಾದ ಪರಿಣಾಮ 14 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಸಂಜೆ ಸುಮಾರು 5 ಗಂಟೆ ವೇಳೆಗೆ ಪುಟಲಪಟ್ಟು ಹಾಲು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ ಉಂಟಾದ ಬಗ್ಗೆ ಮಾಹಿತಿ ದೊರೆಯಿತು. 14 ಕಾರ್ಮಿಕರನ್ನು ಚಿತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಮಹಿಳೆಯರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಿರುಪತಿಯ ಎಸ್‌ವಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗುವುದು’ ಎಂದು ಚಿತ್ತೂರು ಜಿಲ್ಲಾಧಿಕಾರಿ ಡಾ. ನಾರಾಯಣ್ ಭರತ್ ಗುಪ್ತಾ ಹೇಳಿದ್ದಾರೆ.

‘ಉಳಿದವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಅಥವಾ ಕಾರ್ಮಿಕರ ನಿರ್ಲಕ್ಷ್ಯ ಕಾರಣವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೈಗಾರಿಕಾ ಇಲಾಖೆಯ ಪ್ರಧಾನ ವ್ಯವಸ್ಥಾಪಕರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT