ಭಾನುವಾರ, ಜೂನ್ 13, 2021
20 °C

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸಾಧ್ಯತೆ: ಹಲವೆಡೆ ಎನ್‌ಡಿಆರ್‌ಎಫ್‌ ತಂಡ ನಿಯೋಜನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  ರಾಜ್ಯದ ಹಲವು ಭಾಗಗಳಲ್ಲಿ 15 ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಎನ್‌ಡಿಆರ್‌ಎಫ್‌ನ ಮುಖ್ಯಸ್ಥರು ಗುರುವಾರ ತಿಳಿಸಿದರು.

‘ರತ್ನಗಿರಿಯಲ್ಲಿ ನಾಲ್ಕು ತಂಡಗಳು, ಮುಂಬೈ, ಸಿಂಧುದುರ್ಗ, ಪಾಲ್ಘರ್ , ರಾಯಗಡ, ಠಾಣೆಯಲ್ಲಿ ತಲಾ ಎರಡು ಮತ್ತು ಕುರ್ಲಾದಲ್ಲಿ ಒಂದು ತಂಡವನ್ನು ನಿಯೋಜನೆ ಮಾಡಲಾಗಿದೆ’ ಎಂದು ಎನ್‌ಡಿಆರ್‌ಎಫ್‌ ಮಹಾನಿರ್ದೇಶಕ ಎಸ್.ಎನ್ ಪ್ರಧಾನ್ ಟ್ವೀಟ್ ಮಾಡಿದ್ದಾರೆ.

‘ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿತ್ತು. ರಾಜ್ಯ ಸರ್ಕಾರದ ಮನವಿ ಮೇರೆಗೆ ವಿವಿಧ ಸ್ದಳಗಳಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಹವಾಮಾನ ಇಲಾಖೆಯು ಮುಂಬೈ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಿದೆ.

ನೈರುತ್ಯ ಮುಂಗಾರು ಬುಧವಾರ ಮುಂಬೈ ಮತ್ತು ಉಪನಗರಕ್ಕೆ ಆಗಮಿಸಿದ್ದು, ಹಲವೆಡೆ ಭಾರಿ ಮಳೆಯಿಂದಾಗಿ ರಸ್ತೆ ಮತ್ತು ರೈಲ್ವೆ ಹಳಿಗಳು ಜಲಾವೃತವಾಗಿದ್ದವು. ಅಲ್ಲದೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು